ಬಳ್ಳಾರಿ,ಜು.01
ಸಿರುಗುಪ್ಪ ವ್ಯಾಪ್ತಿಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆ (ಕೆಆರ್ಎಸ್-ಪಿಎಂಎಫ್ಬಿವೈ) ಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳನ್ನು ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಆಲಿಕಲ್ಲು ಮಳೆ, ಪ್ರವಾಹ ಮತ್ತು ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರ ನೀಡಲಾಗುವುದು.
ವಿಮಾ ಯೋಜನೆಯಡಿ ಒಳಪಡುವ ನೀರಾವರಿ ಬೆಳೆ: ಕೆಂಪು ಮೆಣಸಿನಕಾಯಿ ಆಗಿದ್ದು, ಪ್ರತಿ ಹೆಕ್ಟರ್ಗೆ ವಿಮಾ ಮೊತ್ತ ರೂ.43,505, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ರೂ.2,175 ಆಗಿರುತ್ತದೆ.
ಪಿಎಂಎಫ್ಬಿವೈ (ಪರಿಷ್ಕøತ) ಮಾರ್ಗಸೂಚಿಯನ್ವಯ ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುತ್ತದೆ. ಬೆಳೆ ಸಾಲ ಪಡೆದ ರೈತರು ಈ ಯೋಜನೆಯಡಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಬೇಕು. ಅಂತಹ ರೈತರನ್ನು ಬೆಳೆ ವಿಮೆ ನೋಂದಣಿ ಯೋಜನೆಯಿಂದ ಕೈಬಿಡಲಾಗುವುದು.
ರೈತರು ಅಗತ್ಯ ದಾಖಲೆಗಳೊಂದಿಗೆ ವಿಮೆಗೆ ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ದೂ.08396-222066 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.