Ad image

ಕೃಷಿ ವಿಶ್ವವಿದ್ಯಾಲಯ ಕಾರ್ಯಾಗಾರ: ಲೇಖನಗಳ ಆಹ್ವಾನ

Vijayanagara Vani
ಕೃಷಿ ವಿಶ್ವವಿದ್ಯಾಲಯ ಕಾರ್ಯಾಗಾರ: ಲೇಖನಗಳ ಆಹ್ವಾನ

ರಾಯಚೂರು,ಜೂ. ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಇದೇ ಜೂನ್ ತಿಂಗಳ ಕೊನೆಯ ವಾರದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ವಿಷಯಗಳಿಗೆ ಸಂಬ0ಧಿಸಿದ-ತೆ ಮಹತ್ವದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, 21 ವಿಷಯಗಳಲ್ಲಿ ಲೇಖನಗಳನ್ನು ಆಹ್ವಾನಿಸಲಾಗಿದೆ.

ಕಲ್ಯಾಣ ಕರ್ನಾಟಕದಲ್ಲಿ ಗ್ರಾಮೀಣ ಭಾರತದ ಸಮಸ್ಯೆ ಮತ್ತು ಪರಿಹಾರ, ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲಾವಾರು ಭೂ ಪರಿಸರ ಮತ್ತು ಇದಕ್ಕೆ ಪೂರಕವಾದ ಆರ್ಥಿಕೋತ್ಪನ್ನದ ಬೆಳೆಗಳು, ಕಲ್ಯಾಣ ಕರ್ನಾಟಕದ ಕೃಷಿ ಕ್ಷೇತ್ರದ ಸ್ಥಿತಿಗತಿ ಮತ್ತು ಭವಿಷ್ಯದಲ್ಲಿ ಅಭಿವೃದ್ಧಿಗಾಗಿ ಯೋಜನೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಖನಿಜ ಸಂಪತ್ತುಗಳಿಗೆ ಪೂರಕವಾದ ಉದ್ಯೋಗಕ್ಕೆ ಕೃಷಿ ಮತ್ತು ಕೃಷಿಯೇತರ ಉದ್ದಿಮೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಬೃಹತ್ ಹಾಗೂ ಮಧ್ಯಮ ಮತ್ತು ಸಣ್ಣ ನೀರಾವರಿ ಯೋಜನೆಗಳ ಸ್ಥಿತಿಗತಿ ಮತ್ತು ಭವಿಷ್ಯದಲ್ಲಿ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕ್ರಮಗಳು, ಕಲ್ಯಾಣ ಕರ್ನಾಟಕ ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ರೈತರಲ್ಲಿ ಅರಿವು ಮೂಡಿಸುವ ವಿವಿಧ ಕಾರ್ಯಕ್ರಮಗಳ ರೂಪರೇಷೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಪ್ರತ್ಯೇಕ ಕೃಷಿ ಮತ್ತು ಕೈಗಾರಿಕಾ ನೀತಿಯ ರೂಪರೇಷೆಗಳು, ಕಲ್ಯಾಣ ಕರ್ನಾಟಕದಲ್ಲಿ ವಿಶೇಷವಾಗಿ ಮಹಿಳೆಯರಲ್ಲಿನ ಅಪೌಷ್ಠಿಕತೆ ನಿರ್ಮೂಲನೆಗೆ ಕೈಗೊಳ್ಳಬೇಕಾದ ಕ್ರಮಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಆರೋಗ್ಯ ಸೇವೆಗಳ ಸ್ಥಿತಿಗತಿ ಮತ್ತು ಭವಿಷ್ಯದ ಯೋಜನೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆ ಸಾರಿಗೆ ವ್ಯವಸ್ಥೆಯ ಸ್ಥಿತಿಗತಿ ಮತ್ತು ಅಭಿವೃದ್ಧಿಗಾಗಿ ಭವಿಷ್ಯದ ಯೋಜನೆಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಸ್ಥಿತಿಗತಿ, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371(ಜೆ)ನ ಸವಲತ್ತುಗಳ ಸ್ಥಿತಿಗತಿ ಮತ್ತು ಭವಿಷ್ಯದಲ್ಲಿ ಇದರ ಪರಿಣಾಮಕಾರಿ ಅನುಷ್ಠಾನಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಕಲ್ಯಾಣ ಕರ್ನಾಟಕ ಪ್ರದೇಶದ ಸಮತೋಲನ ಅಭಿವೃದ್ಧಿಗೆ ಹಮ್ಮಿಕೊಳ್ಳಬೇಕಾದ ಅಭಿವೃದ್ಧಿಪರ ಯೋಜನೆಗಳು ಸೇರಿದಂತೆ ಇತರೆ ಲೇಖನಗಳನ್ನು ಆಹ್ವಾನಿಸಲಾಗಿದ್ದು, ಲೇಖನವು 10ಪುಟಗಳಿಗೆ ಮೀರದಂತೆ ಇರಬೇಕು.

Share This Article
error: Content is protected !!
";