Ad image

ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

Vijayanagara Vani
ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ಕೊಪ್ಪಳ ಮೇ 20ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳ (ಪಿ.ಯು.ಸಿ., ಐ.ಟಿ.ಐ. ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಮಾತ್ರ) 2025-26 ನೇ ಸಾಲಿಗೆ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರವರ್ಗ-1, ಎಸ್ಸಿ & ಎಸ್ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ. 2.50 ಲಕ್ಷ ಮಿತಿಯಲ್ಲಿರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ.1 ಲಕ್ಷಕ್ಕೆ ಮೀರಿರಬಾರದು.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನಾಂಕವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನ್ನು ವೀಕ್ಷಿಸಬಹುದು ಹಾಗೂ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಹಾಗೂ ಸಹಾಯವಾಣಿ ಸಂಖ್ಯೆ: 8050770005, 8050770004 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";