Ad image

ಸರಳ ವಿವಾಹ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Vijayanagara Vani
ಸರಳ ವಿವಾಹ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.05
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.50,000 ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಸಮುದಾಯದವರು ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಸ್ವಯಂ ಸೇವಾ ಸಂಸ್ಥೆಗಳ ಮೂಲಕ 7 ದಿನಗಳ ಮುಂಚಿತವಾಗಿ ಸಾಮೂಹಿಕ ವಿವಾಹದ ಕಾರ್ಯಕ್ರಮದ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸಬೇಕು.
ವಿವಾಹ ನಡೆದ ದಿನದಿಂದ 3 ದಿನಗಳೊಳಗಾಗಿ ಅಗತ್ಯ ದಾಖಲೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು.
*ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ:*
ಬಳ್ಳಾರಿ-8310321101, ಸಂಡೂರು-9036925966/ 8660575061, ಸಿರುಗುಪ್ಪ-9148889975.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮoದಿರದ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article
error: Content is protected !!
";