Ad image

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ: ಅರ್ಜಿ ಆಹ್ವಾನ

Vijayanagara Vani
ಬಳ್ಳಾರಿ,ಜು.07
ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
*ವಿವರ:*
ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";