ಬಳ್ಳಾರಿ,ಜೂ.02
ನಗರದ ರೇಡಿಯೋ ಪಾರ್ಕ್ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸ್ತಕ ಸಾಲಿಗೆ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜೂನ್ 12 ರಂದು ಎರಡನೇ ಸುತ್ತಿನ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಜೂನ್ 13 ರಿಂದ ಆಗಸ್ಟ್ 31 ರ ವರೆಗೆ ಮೂರನೇ ಸುತ್ತಿನ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದ್ದು, ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಪಡೆದು ಪೂರಕ ದಾಖಲೆಗಳೊಂದಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ದಿನದಂದೇ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ನೀಡುವ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿಳಾಸವನ್ನು ಪ್ರವೇಶ ದಿನದಿಂದ ಪರೀಕ್ಷೆ ಮುಗಿಯುವವರೆಗೂ ಬದಲಾಯಿಸುವಂತಿಲ್ಲ.
ಹೆಚ್ಚಿನ ಮಾಹಿತಿಗಾಗಿ ನಗರದ ರೇಡಿಯೋ ಪಾರ್ಕ್ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಮೊ.9916300462 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.