Ad image

ಕನ್ನಡ ಪುಸ್ತಕ ಪ್ರಾಧಿಕಾರ; ಶೇ.50%ರ ರಿಯಾಯಿತಿ ದರಗಳಲ್ಲಿ ಪುಸ್ತಕಗಳ ಮಾರಾಟ

Vijayanagara Vani
ಕನ್ನಡ ಪುಸ್ತಕ ಪ್ರಾಧಿಕಾರ; ಶೇ.50%ರ ರಿಯಾಯಿತಿ ದರಗಳಲ್ಲಿ ಪುಸ್ತಕಗಳ ಮಾರಾಟ
ರಾಯಚೂರು,ಜು.31- ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ 2024ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳಾದ ಕೆ.ಬಿ.ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.
ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬoಧಿಸಿದoತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದಾಗಿದೆ ಎಂದು ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article
error: Content is protected !!
";