ಬಳ್ಳಾರಿ,ಜೂ.25
ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನ ಕೃಷಿ ಬೆಳೆಗಳಿಗೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭಗೊAಡಿದ್ದು, ಬಳ್ಳಾರಿ ಹೋಬಳಿಯ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯಡಿ ತಮ್ಮ ವಿವಿಧ ಕೃಷಿ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಬಸವರಾಜು ಸಿಂಧಿಗೇರಿ ಅವರು ತಿಳಿಸಿದ್ದಾರೆ.
ಬೆಳೆ ವಿಮೆಯಿಂದ ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ, ವಿಮಾಯೋಜನೆಯಿಂದ ಅನುಕೂಲವಾಗಲಿದೆ.
ಮಳೆಯಾಶ್ರಿತ ಬೆಳೆಗಳಾದ ಸೂರ್ಯಕಾಂತಿ ಬೆಳೆಗೆ(ಎಕರೆಗೆ) 330 ರೂ., ಮಳೆಯಾಶ್ರಿತ ಹಾಗೂ ನೀರಾವರಿ ಬೆಳೆ ಹತ್ತಿ (ಎಕರೆಗೆ) ಕ್ರಮವಾಗಿ 1,007 ರೂ., ಹಾಗೂ 1,256 ರೂ., ನೀರಾವರಿ ಮುಸುಕಿನ ಜೋಳ (ಎಕರೆಗೆ) 522 ರೂ., ನೀರಾವರಿ ತೊಗರಿಗೆ 407 ರೂ. ಇದ್ದು, ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ.
ನೀರಾವರಿ ಭತ್ತ (ಎಕರೆಗೆ) 755 ರೂ, ಮಳೆಯಾಶ್ರಿತ ಬೆಳೆಗಳಾದ ಸಜ್ಜೆ-255 ರೂ., ನವಣೆ-229 ರೂ., ತೊಗರಿ-389 ರೂ., ಹುರುಳಿ-166 ರೂ., ಹಾಗೂ ನೆಲಗಡಲೆ/ಶೇಂಗಾ 441 ರೂ. ಇದ್ದು, ಆಗಸ್ಟ್ 16 ಕೊನೆಯ ದಿನವಾಗಿದೆ.
ಬೆಳೆಗಳ ವಿಮೆ ನೋಂದಣಿಗೆ ಹೋಬಳಿ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ನಿಗದಿಪಡಿಸಿದ್ದು, ನಿಗದಿತ ಘಟಕದಲ್ಲಿ ಬೆಳೆ ನೋಂದಣಿ ಮಾಡಲಾಗುವುದು. ರೈತರು ಬೆಳೆ ವಿಮೆ ನೋಂದಣಿಗಾಗಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ರೈತರು ತಮ್ಮ ವ್ಯವಹಾರದ ಬ್ಯಾಂಕ್‌ಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.