Ad image

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ : ಅಲ್ಪಸಂಖ್ಯಾತರಿ0ದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Vijayanagara Vani
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ : ಅಲ್ಪಸಂಖ್ಯಾತರಿ0ದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ
2024-25ನೇ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲೀಂ, ಕ್ರೆöಸ್ತ, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿoದ ವಿವಿಧ ರೀತಿಯ ಸಾಲ ಸೌಲಭ್ಯಕ್ಕೆ ಆನ್ಲೆöನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ರಾಜ್ಯದ ಮತೀಯ ಅಲ್ಪಸಂಖ್ಯಾತ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪ್ರಾಯೋಜಿತ ಯೋಜನೆಗಳಡಿಯಲ್ಲಿ ಅನುಷ್ಠಾನಗೊಳಿಸುತ್ತಿರುವ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, ಸಿಖ್ಖಲಿಗಾರ್ ಸಮುದಾಯದ ಅಭಿವೃದ್ಧಿ ಯೋಜನೆ, ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಉತ್ತೇಜನ (ಸಹಾಯಧನ ಯೋಜನೆ)ಗಳ ಸಾಲ ಸೌಲಭ್ಯ ಪಡೆಯಲು ವೆಬ್ಸೆöಟ್ https://kmdconline.karnataka.gov.in/ ತಂತ್ರಾoಶದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಸಾಲ ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆಗಳು: ಸರ್ಕಾರಿ ಆದೇಶದಲ್ಲಿ ಸೂಚಿಸಿದಂತೆ ಅರ್ಜಿದಾರರು ಮತೀಯ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 6 ಲಕ್ಷ ಮೀರಿರಬಾರದು. ಅರ್ಜಿದಾರರ ವಯಸ್ಸು 18-55 ವರ್ಷ ಮಿತಿಯಲ್ಲಿರಬೇಕು. ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮತ್ತು ವಾಸದ ದೃಢೀಕರಣಕ್ಕಾಗಿ ಪಡಿತರ ಚೀಟಿಯನ್ನು ಹೊಂದಿರಬೇಕು. ನಿಗಮದ ಇತರೆ ಯೋಜನೆಗಳಡಿಯಲ್ಲಿ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ನಿಗಮದಿಂದ ಈಗಾಗಲೇ ಸೌಲಭ್ಯ ಪಡೆದಿರಬಾರದು. ಅರ್ಜಿದಾರರು ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಬ್ಯಾಂಕ್‌ಗಳಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು.
ಅರ್ಜಿದಾರನು ಆನ್ಲೆöನ್ ಮೂಲಕ ಸಲ್ಲಿಸಿದ ಹಾರ್ಡ್ ಕಾಫಿಯನ್ನು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share This Article
error: Content is protected !!
";