Ad image

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ವಿವಿಧ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ

Vijayanagara Vani
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ವಿವಿಧ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ : ಆಗಸ್ಟ್ 05 ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಗಳಡಿಯಲ್ಲಿ ಸೌಲಭ್ಯ ಪಡೆಯಲು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿರಬಾರದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kssd.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

Share This Article
error: Content is protected !!
";