Ad image

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ

Vijayanagara Vani

ಬಳ್ಳಾರಿ,ಡಿ.03

- Advertisement -
Ad imageAd image

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನ ಗಿರಿಜನ ಉಪಯೋಜನೆಯಡಿ ಕುರಿ ಅಥವಾ ಮೇಕೆ ಘಟಕ (10+1) ಅನುಷ್ಠಾನಗೊಳಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತರು ಡಿ.16 ರೊಳಗಾಗಿ ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
*ಬೇಕಾದ ದಾಖಲೆ:*
ಆಧಾರ್ ಕಾರ್ಡ್, ಮತದಾರರ ಚೀಟಿ, ಪಡಿತರ ಚೀಟಿ ನಕಲು ಪ್ರತಿ, ಜಾತಿ ಪ್ರಮಾಣ ಪತ್ರ, ವಾಸ ಸ್ಥಳ ದೃಢೀಕರಣ ಪತ್ರ, ಬ್ಯಾಂಕ್ ಖಾತೆ ನಕಲು ಪತ್ರ.

ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳಿಗೆ ಆದ್ಯತೆ ಮೇಲೆ ನೀಡಲಾಗುವುದು. ಸಂಘಗಳು ಇಲ್ಲದೇ ಇರುವ ತಾಲ್ಲೂಕುಗಳಲ್ಲಿ ಕುರಿ ಸಾಕಾಣಿಕೆದಾರರುಗಳನ್ನು ಫಲಾನುಭವಿಗಳನ್ನಾಗಿ ಪರಗಣಿಸಲಾಗುವುದು.
ಅರ್ಜಿದಾರರು ತಾಲ್ಲೂಕು ಅಥವಾ ಹೋಬಳಿಯ ಕುರಿಗಾರರ ಸಹಕಾರ ಸಂಘದ ಸದಸ್ಯರಾಗಿರಬೇಕು. ಅವಶ್ಯವಿರುವ ಯೋಜನೆಗಳಿಗೆ ಮೊದಲೇ ಬ್ಯಾಂಕ್‌ನಿಂದ ಸಾಲ ಮಂಜೂರಾತಿ, ಸ್ವಂತ ವಂತಿಗೆಯನ್ನು ಭರಿಸಲು ಬದ್ಧರಾಗಿರಬೇಕಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———

Share This Article
error: Content is protected !!
";