ಕಸಾಪ; 10 ಸಾವಿರ ಸದಸ್ಯತ್ವ ನೋಂದಣಿ ಗುರಿ: ಕೇಶವ ಕಾಮತ್

Vijayanagara Vani
ಕಸಾಪ; 10 ಸಾವಿರ ಸದಸ್ಯತ್ವ ನೋಂದಣಿ ಗುರಿ: ಕೇಶವ ಕಾಮತ್
ಮಡಿಕೇರಿ ಜು.10ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಹೆಚ್ಚುಗೊಳಿಸುವ ಮೂಲಕ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಇತ್ತೀಚಿಗೆ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನುಡಿದರು.
ಈಗಾಗಲೇ ಎಲ್ಲಾ ಕಾರ್ಯಕಾರಿ ಮಂಡಳಿಯ ಸದಸ್ಯರು, ತಾಲೂಕು ಅಧ್ಯಕ್ಷರುಗಳು, ಹೋಬಳಿ ಅಧ್ಯಕ್ಷರುಗಳು, ಶ್ರಮಪಡುತ್ತಿದ್ದು ಒಂದು ಸಾವಿರಕ್ಕೂ ಹೆಚ್ಚು ಸದಸ್ಯತ್ವ ನೋಂದಾಯಿಸಲಾಗಿದೆ. ಈ ವರ್ಷದ ಕೊನೆಯೊಳಗಾಗಿ 10 ಸಾವಿರ ಸದಸ್ಯರನ್ನು ಹೊಂದುವ ಗುರಿ ಹೊಂದಿದ್ದು ಎಲ್ಲರೂ ಸಹಕರಿಸಬೇಕು ಎಂದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಪರಿಷತ್ತಿನ ಕಾರ್ಯಕಾರಿ ಮಂಡಳಿಯ ಎಲ್ಲಾ ಸದಸ್ಯರುಗಳು ಒಂದಾಗಿ ಎಲ್ಲಾ ಶಾಲೆ ಕಾಲೇಜುಗಳನ್ನು ಭೇಟಿಯಾಗಿ ಸದಸ್ಯತ್ವ ವನ್ನು ಅಭಿಯಾನದ ರೀತಿಯಲ್ಲಿ ತೊಡಗಿಸಿಕೊಂಡು ಕಾರ್ಯ ನಿರ್ವಹಿಸಬೇಕು. ಪರಿಷತ್ತಿನಲ್ಲಿ ಈ ವರ್ಷ 35 ದತ್ತಿನಿಧಿ ಕಾರ್ಯಕ್ರಮಗಳಿದ್ದು ಅವನ್ನು ಶಾಲಾ ಕಾಲೇಜುಗಳಲ್ಲಿ ನಡೆಸುವ ಮೂಲಕ ಕನ್ನಡ ನಾಡು ನುಡಿ ವಿದ್ಯಾರ್ಥಿಗಳಿಗೆ ತಿಳಿಯಪಡಿಸುವ ಕಾರ್ಯ ಆಗಬೇಕಾಗಿದೆ ಎಂದರು.
ಕಾರ್ಯಕಾರಿ ಸಮಿತಿಯ ಲೆಕ್ಕ ಪರಿಶೋಧನಾ ಸಲಹಾಕಾರ ಸಂಜೀವ್ ಜೋಶಿ ಮಾತನಾಡಿ ಪರಿಷತ್ತಿನ ಲೆಕ್ಕಪತ್ರ ವ್ಯವಸ್ಥಿತವಾಗಿ ನಿರ್ವಹಿಸುವ ಕುರಿತು ತಾಲೂಕು ಹೋಬಳಿ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿ ಅವರಿಗೆ ಮಾಹಿತಿ ನೀಡಿದರು.
ಸದಸ್ಯರ ಪಟ್ಟಿಯಿಂದ ಮೃತಪಟ್ಟಿರುವ ಸದಸ್ಯರುಗಳ ಹೆಸರುಗಳನ್ನು ಈಗಾಗಲೇ ಗುರುತಿಸಿ ಕೇಂದ್ರಕ್ಕೆ ಕಳುಹಿಸಿದ್ದು ಮುಂದಿನ ಚುನಾವಣೆ ಸಂದರ್ಭದಲ್ಲಿ ಆ ಸದಸ್ಯರ ಹೆಸರನ್ನು ಚುನಾವಣಾ ಪಟ್ಟಿಯಿಂದ ತೆಗೆಯುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಅಧ್ಯಕ್ಷರು ಮಾಹಿತಿ ನೀಡಿದರು.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಸ್.ಐ.ಮುನಿರ್ ಅಹಮದ್, ರೇವತಿ ರಮೇಶ್, ಗೌರವಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಜಲಜ ಶೇಖರ್, ಸಹ ಕಾರ್ಯದರ್ಶಿ ಎ.ವಿ.ಮಂಜುನಾಥ್, ಸೋಮವಾರಪೇಟೆ ತಾಲೂಕು ಕಸಾಪ ಅಧ್ಯಕ್ಷ ಎಸ್.ಡಿ.ವಿಜೇತ್, ಮಡಿಕೇರಿ ತಾಲೂಕು ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ, ಶ್ರೀಮಂಗಲ ಹೋಬಳಿ ಅಧ್ಯಕ್ಷ ಉಳುವಂಗಡ ಕಾವೇರಿ ಉದಯ, ಮೂರ್ನಾಡು ಹೋಬಳಿ ಅಧ್ಯಕ್ಷ ಈರಮಂಡ ಹರಿಣಿ, ಸಿದ್ದಾಪುರ ಹೋಬಳಿ ಅಧ್ಯಕ್ಷ ಟಿ.ಎಚ್.ಮಂಜುನಾಥ್, ಐಗೂರು ಹೋಬಳಿ ಅಧ್ಯಕ್ಷ ನಂಗಾರು ಕೀರ್ತಿ ಪ್ರಸಾದ್, ಶಾಂತಳ್ಳಿ ಹೋಬಳಿ ಅಧ್ಯಕ್ಷ ಸಿ.ಎಸ್. ನಾಗರಾಜ್, ಪೆನ್ನಂಪೇಟೆ ಹೋಬಳಿ ಖಜಾಂಜಿ ಚಂದನ್ ಕಾಮತ್, ಕಚೇರಿ ಸಿಬ್ಬಂದಿ ರೇಣುಕಾ ಉಪಸ್ಥಿತರಿದ್ದರು.
WhatsApp Group Join Now
Telegram Group Join Now
Share This Article
error: Content is protected !!