ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಡಿ.ಕೆ ಶಿವಕುಮಾರ್

Vijayanagara Vani
ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಡಿ.ಕೆ ಶಿವಕುಮಾರ್
ಮಂಡ್ಯ.ಜು.22 ರೈತರ ಜೀವನಾಡಿಯಾಗಿರುವ ಕಾವೇರಿ ತಾಯಿಗೆ ಪುಣ್ಯ ಕ್ಷೇತ್ರ ವಾರಣಾಸಿಯಲ್ಲಿ ಮಾಡುವ ಗಂಗಾರತಿ ಮಾದರಿಯ ರೀತಿ ಕಾವೇರಿ ಆರತಿ ಮಾಡಲು ಚಿಂತಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಕೆ.ಆರ್.ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಡಿಸಿಎಂ, ಗಂಗಾರತಿ ಮಾದರಿಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಹಾಗೂ ಕಾವೇರಿ ನಿಗಮದಿಂದ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಉತ್ತರ ಭಾರತದಲ್ಲಿ ಗಂಗಾರತಿ ಬಗ್ಗೆ ಅಧ್ಯಯನ ಮಾಡಲು 25 ಜನರ ಸಮಿತಿ ರಚನೆ ಮಾಡ್ತೇವೆ. ಮಂಡ್ಯ, ಮೈಸೂರು, ಕೊಡಗು ಶಾಸಕರನ್ನು ಒಳಗೊಂಡ ಸಮಿತಿ ಮಾಡಲಾಗುತ್ತದೆ. ಈ ಸಮಿತಿ ವರದಿ ನೀಡಿದ ನಂತರ ಕಾವೇರಿ ಆರತಿ ನಡೆಸುತ್ತೇವೆ. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಸೇರಿಕೊಂಡು ಕಾರ್ಯಕ್ರಮ ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್​ ತಿಳಿಸಿದ್ದಾರೆ.
ಇನ್ನು, ಈ ಬಾರಿ ಉತ್ತಮ ಮಳೆಯಾಗುತ್ತಿದೆ. ವರುಣನ ಕೃಪೆ, ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲಸನ್ನಿಹಿತವಾಗಿದೆ. ಕಳೆದ ವರ್ಷ ಕಷ್ಟದಲ್ಲಿ ಇದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ. ಕಳೆದ ವರ್ಷ 200 ತಾಲೂಕುಗಳಲ್ಲಿ ಬರಗಾಲವಿತ್ತು. ಕಾವೇರಿ ಪ್ರಾಧಿಕಾರ ಆದೇಶದ ಪ್ರಕಾರ 40 ಟಿಎಂಸಿ ಬಿಡಬೇಕಿತ್ತು. ಆದರೆ 20 ಟಿಎಂಸಿ ಬಿಡಲು ಹೇಳಿತ್ತು. ಅಷ್ಟನ್ನೂ ನಾವು ಬಿಡಲಿಲ್ಲ. ಕೆಲವರು ನೀರು ಬಿಟ್ಟಿದ್ದೇವೆ ಎಂದು ವಾದ ಮಾಡಿದ್ದಾರೆ. ನಾವು ಎಲ್ಲರನ್ನು ಕರೆದು ಚರ್ಚೆ ಮಾಡಿದ್ದೇವೆ. ಆನಂತರ ನೀರು ಬಿಟ್ಟಿದ್ದೇವೆ. 30 ಟಿಎಂಸಿ ನೀರು ತಮಿಳುನಾಡಿಗೆ ತಲುಪಿಸಿದ್ದೇವೆ. ಇನ್ನು ಹತ್ತು ಟಿಎಂಸಿ ನೀರು ಬಿಡಬೇಕು. ಈ ವರ್ಷದ ಕೋಟಾ ಮುಗಿಯುತ್ತದೆ. 50 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಆದೇಶವನ್ನು ಪಾಲನೆ ಮಾಡಿದ್ದೇವೆ ಎಂದು ಅವರು ಹೇಳಿದರು.
WhatsApp Group Join Now
Telegram Group Join Now
Share This Article
error: Content is protected !!