ಕವಿತಾಳ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಶೇ. 75ರಷ್ಟು ಹಾಜರಾತಿ ಕಡ್ಡಾಯವಾಗಿರಬೇಕು. ಒಂದು ವೇಳೆ ಹಾಜರಾತಿ ಕಡಿಮೆ ಇರುವಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ರವಿಚಂದ್ರ ಹೇಳಿದರು.
ವಿದ್ಯಾರ್ಥಿಗಳಿಗೆ ಖಡಕ್ ಸೂಚನೆ ನೀಡಿ, ಮಾತನಾಡಿದ ಅವರು ಇನ್ನು ಮುಂದೆ ವಿದ್ಯಾರ್ಥಿಗಳು ಪ್ರತಿ ತರಗತಿಗೆ ಕಡ್ಡಾಯವಾಗಿ ಹಾಜರಿರಬೇಕು, ಪ್ರತಿಯೊಂದು ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು.
ಅನಧಿಕೃತವಾಗಿ ಗೈರುಹಾಜರಾದರೆ ಅಂತಹ ವಿದ್ಯಾರ್ಥಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಯಾರು ಕೂಡ ಕಾಲೇಜಿನ ನಿಯಮಗಳನ್ನು ಮುರಿಯುವಂತಿಲ್ಲ. ಪ್ರತಿಯೊಬ್ಬರೂ ನಿಯಮಗಳನ್ನ ಪಾಲಿಸಬೇಕು. ಶಿಸ್ತು, ಸಮಯ ಪಾಲನೆ ಜೊತೆಗೆ ಕಡ್ಡಾಯ ಹಾಜರಾತಿ ಇರಬೇಕು, ಪ್ರಾಯೋಗಿಕ ವರದಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು.ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ವಿದ್ಯಾರ್ಥಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.