Ad image

ಎಜುಕಾನ್-2024; ಎರಡು ದಿನಗಳ ಶೈಕ್ಷಣಿಕ ಸಮಾವೇಶದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಶೈಕ್ಷಣಿಕ ಅಭಿವೃದ್ಧಿ ಸಾಧಿಸಲು “ಅಕ್ಷರ ಆವಿಷ್ಕಾರ” ಸಹಕಾರ

Vijayanagara Vani
ಎಜುಕಾನ್-2024; ಎರಡು ದಿನಗಳ ಶೈಕ್ಷಣಿಕ ಸಮಾವೇಶದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಶೈಕ್ಷಣಿಕ ಅಭಿವೃದ್ಧಿ ಸಾಧಿಸಲು “ಅಕ್ಷರ ಆವಿಷ್ಕಾರ” ಸಹಕಾರ
ಬಳ್ಳಾರಿ,ಆ.01
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವತಿಯಿಂದ ‘ಅಕ್ಷರ ಆವಿಷ್ಕಾರ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಭಾಗದ ಶೈಕ್ಷಣಿಕ ಅಭಿವೃದ್ಧಿ ಸಾಧಿಸಲು ಸಹಕಾರವಾಗುತ್ತದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗ, ಜೆಎಸ್‌ಡಬ್ಲೂö್ಯ ಫೌಂಡೇಶನ್ ತೋರಣಗಲ್ಲು ಇವರ ಸಂಯುಕ್ತಾಶ್ರಯದಲ್ಲಿ ತೋರಣಗಲ್ಲಿನ ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಎಜುಕಾನ್-2024 ಎರಡು ದಿನಗಳ ಶೈಕ್ಷಣಿಕ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾ ಕಾಲೇಜುಗಳಲ್ಲಿ ಮೂಲಭೂತ ಮೂಲಸೌಕರ್ಯ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಕೆಆರ್‌ಡಿಬಿಯ ವಾರ್ಷಿಕ ನಿಧಿಯಲ್ಲಿ ಶೇ.25 ರಷ್ಟು ಹಣಕಾಸು ವಿನಿಯೋಗಿಸಲು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
2023-24ರ ಆರ್ಥಿಕ ವರ್ಷದಲ್ಲಿ 1,008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ, 872 ಶಾಲೆಗಳಲ್ಲಿ ದ್ವಿಭಾಷಾ ತರಗತಿ ಮತ್ತು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಾದ್ಯಂತ 306 ಶಾಲೆಗಳಲ್ಲಿ ಎನ್‌ಎಸ್‌ಕ್ಯೂಎಫ್(ರಾಷ್ಟಿçÃಯ ಕೌಶಲ್ಯ ಅರ್ಹತಾ ಚೌಕಟ್ಟು) ತರಗತಿಗಳನ್ನು ನಡೆಸಲಾಗಿದೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದ 9,247 ಮಾದರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ‘ಅಕ್ಷರ ಆವಿಷ್ಕಾರ’ ಯೋಜನೆಯಡಿ ವಾರ್ಷಿಕವಾಗಿ ಎರಡು ಸಾವಿರ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ತಿಳಿಸಿದರು.
ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತ ಆಕಾಶ್.ಎನ್ ಅವರು ಮಾತನಾಡಿ, ಗುಣಾತ್ಮಕ ಶಿಕ್ಷಣ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ಏಳು ಜಿಲ್ಲೆಯ 41 ವಿವಿಧ ಸಂಸ್ಥೆಗಳೊAದಿಗೆ ಶೈಕ್ಷಣಿಕ ಸಾಧನೆಗಳ ಕುರಿತು ಶಿಬಿರಾರ್ಥಿಗಳೊಡನೆ ಚರ್ಚಿಸಿ, ಮುಂದಿನ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ಶೈಕ್ಷಣಿಕ ಸಮನ್ವಯ ಸಾಧಿಸಲು ವಿದ್ಯಾರ್ಥಿಗಳೊಂದಿಗೆ ಶಿಕ್ಷಕರ ಪಾತ್ರ ಮುಖ್ಯವಾಗಿದ್ದು, ವಿದ್ಯಾರ್ಥಿಗಳಿಗಿರುವ ಕಲಿಕಾ ಸಮಸ್ಯೆ, ಗೊಂದಲಗಳನ್ನು ನುರಿತ ಉಪನ್ಯಾಸಕರಿಂದ ಈ ಸಮಾವೇಶದಲ್ಲಿ ಬಗೆಹರಿಸಿಕೊಳ್ಳಬಹುದು ಎಂದು ಹೇಳಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಲು ಗುಣಮಟ್ಟ ಶಿಕ್ಷಣದೊಂದಿಗೆ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಸಹಭಾಗಿತ್ವ ಅವಶ್ಯವಾಗಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ನಾಗತಿಹಳ್ಳಿ ಜಯಪ್ರಕಾಶ ಅವರು “ಸಾಮರ್ಥ್ಯ ಅಭಿವೃದ್ಧಿ ಮತ್ತು ನಾಯಕತ್ವ” ಎಂಬ ವಿಷಯದ ಕುರಿತು ಕಾರ್ಯಾಗಾರ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ವಿಜಯನಗರ ಜಿಲ್ಲಾಧಿಕಾರಿ ಎಂ.ದಿವಾಕರ, ವಿಜಯನಗರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ, ಜೆಎಸ್‌ಬ್ಲ್ಯೂನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿನಿ ಸಕ್ಸೆನಾ, ವಡ್ಡು ಗ್ರಾಪಂ ಅಧ್ಯಕ್ಷೆ ಕೆ.ಎಂ.ನಿAಗಮ್ಮ ನಾಗರಾಜ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕರು ಉಪಸ್ಥಿತರಿದ್ದರು.
ಸಮಾವೇಶದಲ್ಲಿ 250ಕ್ಕೂ ಹೆಚ್ಚು ಶಿಬಿರಾರ್ಥಿಗಳು ನೋಂದಣಿಯಿಸಿಕೊoಡು ಭಾಗವಹಿಸಿದ್ದರು.
Share This Article
error: Content is protected !!
";