ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಭರ್ಜರಿ ಮುನ್ನಡೆ ಸಾಧಿಸಿದ ಕೋಟ ಶ್ರೀನಿವಾಸ್ ಪೂಜಾರಿ

Vijayanagara Vani
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಭರ್ಜರಿ ಮುನ್ನಡೆ ಸಾಧಿಸಿದ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ/ಚಿಕ್ಕಮಗಳೂರು, ಜೂನ್‌ 04: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮತ ಎಣಿಕೆ ಭರದಿಂದ ಸಾಗುತ್ತಿದ್ದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಈವರೆಗೂ ನಾಲ್ಕು ಸುತ್ತಿನ ಮತ ಎಣಿಕೆ ನಡೆದಿದ್ದು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಈವರೆಗೂ ನಡೆದ ಮತ ಎಣಿಕೆಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿಗೆ ಒಂದು ಲಕ್ಷ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಾರಿ ಲೋಕಸಭಾ ಚುನಾವಣೆಯಲ್ಲಿ ಹೈವೋಲ್ಟೇಜ್ಕ್ಷೇತ್ರವಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನತ್ತ ಹೆಜ್ಜೆ ಇಡುತ್ತಿದೆ

ಈವರೆಗೂ ನಡೆದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 2,10,116 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ 1,27,459 ಮತಗಳನ್ನು ಪಡೆದಿದ್ದಾರೆ. ಸದ್ಯ ಮತ ಎಣಿಕೆ ಮುಂದುವರಿದದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ಜಿಲ್ಲೆ ಬರುವುದರಿಂದ ಉಡುಪಿಯಲ್ಲಿ ನಾಲ್ವರು ಬಿಜೆಪಿ ಶಾಸಕರು ಹಾಗೂ ಚಿಕ್ಕಮಗಳೂರಿನ ನಾಲ್ಕೂ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಶಾಸಕರು ಇರುವುದರಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಯಾರದು ಎಂದು ಊಹಿಸುವುದು ಕಷ್ಟ ಸಾಧ್ಯವಾಗಿತ್ತು. ಇಬ್ಬರು ಅಭ್ಯರ್ಥಿಗಳಲ್ಲಿ ಯಾರೇ ಗೆದ್ದರೂ ಅತ್ಯಂತ ಸಣ್ಣ ಮಾರ್ಜಿನ್ನಲ್ಲಿ ಗೆಲ್ಲಬಹುದು.

ದಾಖಲೆಯ ಗೆಲುವು ಅಥವಾ ದೊಡ್ಡ ಅಂತರದ ಗೆಲವು ಸಿಗುವುದು ಬಾರಿ ಕಷ್ಟವಾಗಿದೆ. ಒಂದು ಜಿಲ್ಲೆಯ ಒಬ್ಬ ಅಭ್ಯರ್ಥಿ ಲೀಡ್ಬಂದರೆ ಮತ್ತೊಂದು ಜಿಲ್ಲೆಯಲ್ಲಿ ಮತ್ತೊಬ್ಬ ಅಭ್ಯರ್ಥಿ ಮುನ್ನೆಡೆ ಸಾಧಿಸುವ ಸಾಧ್ಯತೆ ಎಂದು ಅಂದಾಜಿಸಲಾಗಿತ್ತು. ಆದರೆ ಸದ್ಯ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಒಂದು ಲಕ್ಷ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!