ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಅಪರೂಪದ ಸಾಹಿತಿ ಕೆ. ಎಸ್ ನರಸಿಂಹಸ್ವಾಮಿ ಅವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬಣ್ಣಿಸಿದರು.
ಇಂದು (ಮಾ.23) ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆದ ಕೆ.ಎಸ್. ನರಸಿಂಹಸ್ವಾಮಿ ಸಾಹಿತ್ಯ ಪ್ರಶಸ್ತಿ ಹಾಗೂ ಕಾವ್ಯ ಗಾಯನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆ.ಎಸ್ ನರಸಿಂಹಸ್ವಾಮಿರವರು ಮಲ್ಲಿಗೆ ಕವಿ ಎಂದೇ ಮನೆ ಮನೆ ಮಾತಾಗಿದ್ದಾರೆ ಎಂದು ಹೇಳಿದರು.
ಜಗತ್ತಿನ ಯಾವ ದೇಶದಲ್ಲೂ ಇರದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಯ ಶ್ರೀಮಂತಿಕೆಯನ್ನು ನಮ್ಮ ಭಾರತದ ದೇಶ ಹೊಂದಿದೆ, ಕುವೆಂಪು, ದಾ.ರಾ.ಬೇಂದ್ರೆ ಅಂತಹಾ ಮಹಾನ್ ಸಾಹಿತಿಗಳು ದೇಶ ಸಾಹಿತ್ಯ ವೈಭವನ್ನು ಹೆಚ್ಚಿಸಿದ್ದಾರೆ. ಅವರೆಲ್ಲಾರ ಸಾಧನೆಗಳು ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಜವಾಬ್ದಾರಿ ನಮ್ಮದು ಎಂದು ತಿಳಿಸಿದರು.
ನಾಡಿನ ಖ್ಯಾತ ಸಾಹಿತಿ ನರಸಿಂಹಾಚಾರ್ ಹಾಗೂ ಕೆ. ಎಸ್ ನರಸಿಂಹಸ್ವಾಮಿ ಅವರ ಟ್ರಸ್ಟ್ ಗಳ ಜವಾಬ್ದಾರಿಯನ್ನು ಕಿಕ್ಕೇರಿ ಕೃಷ್ಣಮೂರ್ತಿ ಹಾಗೂ ಪ್ರೊ. ಕೃಷ್ಣೇಗೌಡ ರವರಿಗೆ ನೀಡಲಾಗಿದೆ, ಟ್ರಸ್ಟ್ನ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ನಂತರ ಮಾತನಾಡಿದ ಸಾಹಿತಿ ಜಯಪ್ರಕಾಶ್ ಗೌಡ ಅವರು ರಾಷ್ಟೀಯ ಅಂತಾರಾಷ್ಟ್ರೀಯ ಮಟ್ಟದವರೆಗೆ ಹೆಸರು ಮಾಡಿರುವ ಮೈಸೂರು ಮಲ್ಲಿಗೆ ಕಾವ್ಯದ ಸಾಹಿತಿ ನಮ್ಮ ನೆಲದವರು ಎನ್ನುವುದೇ ನಮ್ಮೆಲ್ಲರ ಹೆಮ್ಮೆ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯವಾದದ್ದು ಎಂದರು.
ನಂತರ ಮಾತನಾಡಿದ ಡಾ. ನಾ. ದಾಮೋದರ ಶೆಟ್ಟಿಯವರು ಕೆ. ಎಸ್ ನರಸಿಂಹಸ್ವಾಮಿಯವರು ಪ್ರೇಮ ಕವಿಯಾದರು ಎಂದಿಗೂ ತಮ್ಮ ಚೌಕ್ಕಟನ್ನು ಮೀರಿ ಕಾವ್ಯ ರಚಿಸಿದವರಲ್ಲ ಬರವಣಿಗೆಯಲ್ಲಿ ಅವರಂತೆ ನಿಷ್ಠೆಯಿಂದಯಿದ್ದು ಅವರನ್ನು ಪಾಲಿಸಬೇಕು. ನಾನು ಅವರ ಹಾದಿಯಲ್ಲಿಯೇ ಸಾಗುತ್ತೇನೆ ಎಂದು ಹೇಳಿದರು.
ನಂತರ ಮಾತನಾಡಿದ ಗಾಯಕಿ ಸಂಗೀತಾ ಕಟ್ಟಿಯವರು ಕೆ. ಎಸ್ ನರಸಿಂಹಸ್ವಾಮಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದ್ದೀರಿ ಇಂತಹ ಗಣ್ಯ ವ್ಯಕ್ತಿಗಳ ಆದರ್ಶವನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಪ್ರೊ. ಜಯಪ್ರಕಾಶ್ ಗೌಡ, ಡಾ. ನಾ ದಾಮೋದರ ಶೆಟ್ಟಿ ಅವರಿಗೆ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ಗಾಯಕರಾದ ಸಂಗೀತಾ ಕಟ್ಟಿ, ರಮೇಶ್ ಚಂದ್ರ ಅವರಿಗೆ ಕಾವ್ಯಗಾಯನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ. ರವಿಕುಮಾರ್, ಮೈಸೂರು ಸಕ್ಕರೆ ಕಾರ್ಖಾನೆಯ ಅಧ್ಯಕ್ಷಸಿ. ಡಿ ಗಂಗಾಧರ್,
ಮುಡಾ ಅಧ್ಯಕ್ಷ ನಹೀಮ್ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ. ಆರ್, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಖ್ಯಾತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.