ಬಳ್ಳಾರಿ,ಡಿ.20
ಜಿಲ್ಲಾಡಳಿತ ವತಿಯಿಂದ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿ ಆಚರಣೆ ಕುರಿತು ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಡಿ.29 ರಂದು ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಮತ್ತು ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆ ಜಯಂತಿಯ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದರು.
ಎಲ್ಲ ಸಮುದಾಯದವರು, ಸಂಘ-ಸAಸ್ಥೆಗಳ ಮುಖಂಡರು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ತಿಳಿಸಿದರು.
ಡಿ.29 ರಂದು ಕುವೆಂಪು ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಮತ್ತು ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆಯ ವೇದಿಕೆ ಕಾರ್ಯಕ್ರಮವನ್ನು ಆಯಾ ದಿನದಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಆಯೋಜಿಸಲಾಗುವುದು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ ಹಾಗೂ ಸ್ವಚ್ಛತೆ ಸೇರಿದಂತೆ ಇತರೆ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಗೀನಗಾಯನ, ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ಮಹನೀಯರ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ನಂತರದಲ್ಲಿ ಲಘು ಉಪಾಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಸಮುದಾಯದ ಮುಖಂಡರು ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ಹಾಗೂ ಯಶಸ್ವಿಗೊಳಿಸಲು ತಮ್ಮ ಅಭಿಪ್ರಾಯ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.