Ad image

ಕಾನೂನು ಪದವೀಧರರಿಗೆ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿಗಾಗಿ ಅರ್ಜಿ ಆಹ್ವಾನ

Vijayanagara Vani
ಬಳ್ಳಾರಿ,ಜು.04
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ 02 ವರ್ಷಗಳ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದಿನ 2024-25 ನೇ ಸಾಲಿನಲ್ಲಿ ತಾಂತ್ರಿಕ ದೋಷದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಕಲ್ಪಿಸಲಾಗಿರುವುದರಿಂದ 2024-25 ಮತ್ತು 2025-26 ನೇ ಸಾಲಿಗೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಅರ್ಜಿ ಸಲ್ಲಿಸಬಹುದು.
ಅರ್ಹ ಪದವೀಧರರು ವರ್ಷದ ಎಲ್ಲಾ ದಿನಗಳಲ್ಲಿ ಇಲಾಖೆಯ ವೆಬ್‌ಸೈಟ್ www.sw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನÀ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಮತ್ತು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";