ಗ್ರಂಥಾಲಯ ವಿಜ್ಞಾನ ತರಬೇತಿ: ಅರ್ಜಿ ಆಹ್ವಾನ

Vijayanagara Vani
ಗ್ರಂಥಾಲಯ ವಿಜ್ಞಾನ ತರಬೇತಿ: ಅರ್ಜಿ ಆಹ್ವಾನ
ಸಾರ್ವಜನಿಕ ಗ್ರಂಥಾಲಯ ಇಲಾಖೆ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮೈಸೂರು ವಿಭಾಗದ ಮಂಗಳೂರು, ಬೆಳಗಾವಿ ವಿಭಾಗದ ಧಾರವಾಡ ಮತ್ತು ಕಲಬುರಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗಳನ್ನು ನಡೆಸಲಾಗುತ್ತಿದ್ದು, ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಿ.ಯು.ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ.40 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶೇ.35ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರಾಗಿರುತ್ತಾರೆ.
ಹಾಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆ “ಡಿ” ದರ್ಜೆಯ ಗ್ರಂಥಾಲಯ ಸಹವರ್ತಿಗಳು ಸಂಬಂಧಪಟ್ಟ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಮುಖಾಂತರ, ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರು ಸಂಬಂಧಪಟ್ಟ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಹಾಗೂ ಇತರೆ ಸಂಸ್ಥೆಯ ಮುಖ್ಯಸ್ಥರ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಯ ಜೊತೆಗೆ ಪಿ.ಯು.ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಸೇವೆಗೆ ಸೇರಿದ ದಿನಾಂಕ, ವೇತನ ಪ್ರಮಾಣ ಪತ್ರ, ನಡವಳಿಕೆ ಪ್ರಮಾಣ ಪತ್ರಗಳು ನಕಲು ಪ್ರತಿಗಳನ್ನು ಲಗತ್ತಿಸಬೇಕು.
ಸಾಮಾನ್ಯ ಅಭ್ಯರ್ಥಿಗಳು ಪಿ.ಯು.ಸಿ ಅಂಕಪಟ್ಟಿ, ಜಾತಿ, ಕನ್ನಡ ಮಾಧ್ಯಮ, ಗ್ರಾಮೀಣ, ಮಹಿಳೆ, ಮಾಜಿ ಸೈನಿಕ, 371 ಜೆ ಪ್ರಮಾಣ ಪತ್ರಗಳ ದೃಢೀಕೃತ ನಕಲು ಪ್ರತಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಕಬ್ಬನ್ ಉದ್ಯಾನವನದ ರಾಜ್ಯ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿ, ಬೆಂಗಳೂರು-560001 ಅಥವಾ ದೂ.08022-212128, ಧಾರವಾಡ ಡಿಸಿ ಕಚೇರಿ ಆವರಣದ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿ ಧಾರವಾಡ-580001 ಅಥವಾ ದೂ.0836-1442465, ಮಂಗಳೂರಿನ ಬಾವುಟಗಡ್ಡೆಯ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿ ಅಥವಾ ದೂ.0824-2425873, ಕಲಬುರಗಿಯ ಜಗತ್ ವೃತ್ತದ ಸೂಪರ್ ಮಾರ್ಕೆಟ್ನ ಎಂ.ವಿ.ಎಚ್.ಶಾಲೆ ಆವರಣದ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿ ಅಥವಾ ದೂ.08472-221543 ಗೆ ಸಂಪರ್ಕಿಸಬಹುದು.
ಮೇಲ್ಕಂಡ ವಿಳಾಸಗಳಲ್ಲಿ ನಿಮಗೆ ಸಂಬಂಧಪಟ್ಟ ಆಯಾ ಕಂದಾಯ ವಿಭಾಗಗಳಿಂದ ಅರ್ಜಿ ಪಡೆದು ಸಲ್ಲಿಸಬಹುದು ಎಂದು ಬಳ್ಳಾರಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!