ಬಳ್ಳಾರಿ,ಜು.07
ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಾಸುದೇವರಾಮ್.ಎನ್ ಅವರು ತಿಳಿಸಿದ್ದಾರೆ.
ಪೊಲೀಸ್ ಅಧೀಕ್ಷಕ ವಾಸುದೇವರಾಮ್.ಎನ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಸುರೇಶ್.ಎಂ.ಭಾವಿಮನಿ ಮತ್ತು ನಾಗರೆಡ್ಡಿ ಇವರ ನೇತೃತ್ವದಲ್ಲಿ ಕುರುಗೋಡು, ಬಳ್ಳಾರಿ, ಸಿರುಗುಪ್ಪ, ಸಂಡೂರು ಮತ್ತು ಕಂಪ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ.
ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:
ಜುಲೈ 09 ರಂದು ಬೆಳಿಗ್ಗೆ 11.30 ಗಂಟೆಯಿ0ದ ಮಧ್ಯಾಹ್ನ 2 ಗಂಟೆಯವರೆಗೆ ಕುರುಗೋಡಿನ ತಹಶೀಲ್ದಾರರ ಕಚೇರಿ ಸಭಾಂಗಣ.
ಜುಲೈ 15 ರಂದು ಬೆಳಿಗ್ಗೆ 11.30 ಗಂಟೆಯಿ0ದ ಮಧ್ಯಾಹ್ನ 02 ಗಂಟೆಯವರೆಗೆ ಬಳ್ಳಾರಿಯ ಹೊಸ ಡಿಸಿ ಕಚೇರಿಯ ತಹಶೀಲ್ದಾರರ ಕಚೇರಿ ಸಭಾಂಗಣ.
ಜುಲೈ 17 ರಂದು ಬೆಳಿಗ್ಗೆ 11.30 ಗಂಟೆಯಿ0ದ ಮಧ್ಯಾಹ್ನ 02 ಗಂಟೆಯವರೆಗೆ ಸಿರುಗುಪ್ಪದ ಸಿಡಿಪಿಒ ಕಚೇರಿ ಸಭಾಂಗಣ.
ಜುಲೈ 23 ರಂದು ಬೆಳಿಗ್ಗೆ 11.30 ಗಂಟೆಯಿ0ದ ಮಧ್ಯಾಹ್ನ 02 ಗಂಟೆಯವರೆಗೆ ಸಂಡೂರು ತಹಶೀಲ್ದಾರರ ಕಚೇರಿ ಸಭಾಂಗಣ.
ಜುಲೈ 25 ರಂದು ಬೆಳಿಗ್ಗೆ 11.30 ಗಂಟೆಯಿ0ದ ಮಧ್ಯಾಹ್ನ 02 ಗಂಟೆಯವರೆಗೆ ಕಂಪ್ಲಿಯ ತಹಶೀಲ್ದಾರರ ಕಚೇರಿ ಸಭಾಂಗಣ.
ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ.01 ಮತ್ತು 02 ಗಳನ್ನು ಸಹ ನೀಡಲಾಗುವುದು. ಕುಂದು ಕೊರತೆಗಳಿರುವ ಸಾರ್ವಜನಿಕರು ದೂರುಗಳಿದ್ದಲ್ಲಿ ನಿಗದಿಪಡಿಸಿದ ದಿನದಂದು ಅರ್ಜಿ ನಮೂನೆಯಲ್ಲಿ ಅಹವಾಲು ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.