Ad image

ರಾಮಾಯಣ ಮಹಾಕಾವ್ಯ ಬರೆದ ಮಹರ್ಷಿ ವಾಲ್ಮೀಕಿ ಕವಿಗಳ ಕವಿಯಾಗಿದ್ದಾರೆ.  

Vijayanagara Vani
ರಾಮಾಯಣ ಮಹಾಕಾವ್ಯ ಬರೆದ ಮಹರ್ಷಿ ವಾಲ್ಮೀಕಿ ಕವಿಗಳ ಕವಿಯಾಗಿದ್ದಾರೆ.   

.ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಂಗವಾಗಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆಚರಿಸಲಾಯಿತು.

ರಾಮಾಯಣವು ಭಾರತೀಯರ ಜೀವನಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ಭರತಖಂಡದಲ್ಲಿನ ಅರಣ್ಯಗಳು, ಪರ್ವತಗಳು, ನದಿಗಳು, ಸರೋವರಗಳು, ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯವನ್ನು ವರ್ಣಿಸಿದ್ದಾರೆ.


ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ, ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ. ಇಂತಹ ಅನನ್ಯವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯನ್ನು ‘ಕವಿಗಳ ಕವಿ’ ಎಂದು ಮಹಾಕವಿ ಕಾಳಿದಾಸ ಗೌರವಿಸಿದ್ದಾನೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ಪರಶುರಾಮ ತಿಳಿಸಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಎಸ್.ಆನಂದ, ಉಪಾಧ್ಯಕ್ಷೆ ದೂಡ್ಡ ರುದ್ರಮ್ಮ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರು‌ ಹಾಗೂ ಪ.ಪಂ ಸಿಬ್ಬಂದಿಗಳು, ಸಮಾಜದ ಮುಖಂಡರು ಇದ್ದರು.

Share This Article
error: Content is protected !!
";