ರಾಯಚೂರು,ಮೇ. ಮೇ.31ರಂದು ಬೆಳಿಗ್ಗೆ 9:೦೦ ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ದಿನಾಚರಣೆ ಅಂಗವಾಗಿ ಬೆಳಿಗ್ಗೆ -9:೦೦ ಗಂಟೆಗೆ ಆರೋಗ್ಯ ಇಲಾಖೆಯ ಕಚೇರಿಯಿಂದ ತೀನ್ ಕಂದಿಲ್ ವೃತ್ತ, ಮಹಾವೀರ ವೃತ್ತ, ಜೈನ್ ಮಂದಿರ, ಮಾರ್ಗವಾಗಿ ಜಾಗೃತಿ ಜಾತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣಾ ಕೋಶದ ಜಿಲ್ಲಾ ಸಮೀಕ್ಷಣಾಧಿಕಾರಿಗಳು ಹಾಗೂ ಕಾರ್ಯಕ್ರಮಾಧಿಕಾರಿಗಳು ತಿಳಿಸಿದ್ದಾರೆ.
ಮೇ.30ರಿಂದ ಜೂ.3೦ರವರೆಗೆ ತಂಬಾಕು ಉದ್ಯಮ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು ಎಂಬ ವಿಷಯದ ಕುರಿತು ಶಾಲಾ, ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಗುಂಪು ಚರ್ಚೆಗಳನ್ನು ಸಾರ್ವಜನಿಕ ಅರಿವು ಕಾರ್ಯಕ್ರಮಗಳನ್ನು ಆರೋಗ್ಯ ತಪಾಸಣಾ ಶಿಬಿರಗಳನ್ನು ಮತ್ತು ಆಕಾಶವಾಣಿ ರೆಡಿಯೋ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.