*ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ*

Vijayanagara Vani
*ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ*
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸುತ್ತಮುತ್ತಲಿನ ನಿವಾಸಿಗಳು ಜಾಮರ್‌ ಸಮಸ್ಯೆ ವಿರುದ್ಧ ಜೈಲು ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಕೇಂದ್ರ ಸರ್ಕಾರದ ಸಂವಹನ ಸಚಿವಾಲಯ, ದೂರಸಂಪರ್ಕ ಇಲಾಖೆಗೆ ಹಾಗೂ ರಾಜ್ಯ ಗೃಹ ಇಲಾಖೆಗೆ ಪತ್ರ ಬರೆದು ಸಮಸ್ಯೆ ಇತ್ಯರ್ಥ ಪಡಿಸುವಂತೆ ಮನವಿ ಮಾಡಿದ್ದಾರೆ.
ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆ ಕುರಿತಾಗಿ ಟೆಲಿಕಾಂ ಸೇವಾ ಪೂರೈಕೆದಾರರ ಜೊತೆ ಸಭೆ ನಡೆಸಲಾಗಿದ್ದು, ತಕ್ಷಣ ಸಮಸ್ಯೆ ಬಗೆಹರಿಸುವಂತೆ ಸೂಚಿಸಲಾಗಿದೆ.
ನೆಟ್‌ವರ್ಕ್‌ ಸಮಸ್ಯೆ ಎದುರಿಸುತ್ತಿರುವ ಗ್ರಾಹಕರ ಸಂಖ್ಯೆಗಳನ್ನು ಸಂಗ್ರಹಿಸಿ ಪರಿಶೀಲಿಸಿ, ಒಂದು ತಿಂಗಳ ಅವಧಿಯಲ್ಲಿ ನೆಟ್‌ವರ್ಕ್‌ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಪೂರೈಕೆದಾರರು ತಿಳಿಸಿದ್ದಾರೆ. ಕೆಲವು ಎತ್ತರದ ಅಪಾರ್ಟ್‌ಮೆಂಟ್‌ಗಳಿಗೆ ಏರ್‌ಟೆಲ್‌ ಪರ್ಯಾಯ ನೆಟ್‌ವರ್ಕ್‌ ವ್ಯವಸ್ಥೆಯನ್ನು ಕಲ್ಪಿಸಿದೆ.
ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ
@osd_cmkarnataka `ಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಿ.
WhatsApp Group Join Now
Telegram Group Join Now
Share This Article
error: Content is protected !!