Ad image

ಇಂಧನ ಇಲಾಖೆ ಕುರಿತು ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಸಭೆ ಸದ್ಯದಲ್ಲೇ 2000 ಲೈನ್‌ಮೆನ್‌ಗಳ ನೇಮಕ; ಇಂಧನ ಸಚಿವ ಕೆ.ಜೆ.ಜಾರ್ಜ್

Vijayanagara Vani
ಇಂಧನ ಇಲಾಖೆ ಕುರಿತು ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಸಭೆ ಸದ್ಯದಲ್ಲೇ 2000 ಲೈನ್‌ಮೆನ್‌ಗಳ ನೇಮಕ; ಇಂಧನ ಸಚಿವ ಕೆ.ಜೆ.ಜಾರ್ಜ್
oplus_0

ರಾಯಚೂರು,ಜು.10, ಇಂಧನ ಇಲಾಖೆಗೆ ಸದ್ಯದಲ್ಲೇ 2,000 ಲೈನ್‌ಮೆನ್‌ಗಳ ನೇಮಕ ಆಗಲಿದ್ದು, ಈ ಸಂಬ0ಧ 15ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ಹೇಳಿದ್ದಾರೆ.

- Advertisement -
Ad imageAd image

ಅವರು ಜು.10ರ ಬುಧವಾರ ದಂದು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂಧನ ಇಲಾಖೆಯ ಸಂಬoಧಿಸಿದ0ತೆ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೈನ್‌ಮೆನಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ, ಎಂದರು.

ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾವಾಗ ಸ್ಥಳಿಯರಿಗೆ ಆದ್ಯತೆ ನೀಡಬೇಕು ಮತ್ತು 371 (ಜೆ) ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದ್ದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್‌ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ತಿಳಿಸಿದರು.

ಈಗಾಗಲೇ 1000 ಸಹಾಯಕ ಇಂಜಿನಿಯರ್‌ಗಳ (ಎ.ಇ) ಕಿರಿಯ ಇಂಜಿನಿಯರ್‌ಗಳ (ಜೆ.ಇ) ನೇಮಕ ಮಾಡಿ ಕಾರ್ಯಾದೇಶವನ್ನೂ ನೀಡಿದ್ದೇವೆ. ಇಂಧನ ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ 400 ಸಹಾಯಕ ಇಂಜಿನಿಯರ್‌ಗಳಿಗೆ ಇತ್ತೀಚೆಗೆ ಕಾರ್ಯಾನುಭವ ತರಬೇತಿ ನೀಡಲಾಗಿದೆ. ತ್ವರಿತ ನೇಮಕಾತಿಗಾಗಿ ಈ ಅಭ್ಯರ್ಥಿಗಳು ನನಗೆ ಮನವಿ ಸಲ್ಲಿಸಿದ್ದರು. ಇಲಾಖೆಯ ಹಿರಿಯ ಅಧಿಕಾರಳ ನಿರಂತರ ಪ್ರಯತ್ನದಿಂದ 6 ತಿಂಗಳೊಳಗೆ ನೇಮಕ ಆದೇಶ ನೀಡಲಾಗಿದೆ,” ಎಂದು ಅವರು ಹೇಳಿದರು.

ದಾಖಲೆ ಉತ್ಪಾದನೆ; ಈ ಬಾರಿ ಆರ್‌ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಉಷ್ಣ ಸ್ಥಾವರದಲ್ಲಿ ದಾಖಲೆ ವಿದ್ಯುತ್ ಉತ್ಪಾದನೆ ಮಾಡಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು. ಅಧಿಕಾರಿಗಳ ಶ್ರಮವನ್ನು ಪ್ರಶಂಸನೀಯ. ಅವರೆಲ್ಲನ್ನೂ ಅಭಿನಂದಿಸಲೆoದೇ ಇಲ್ಲಿಗೆ ಬಂದಿದ್ದೇನೆ ಎಂದರು.

ಕಳೆದ ಜನವರಿಯಿಂದ ಮೇ ಅಂತ್ಯದವರೆಗೆ ಪ್ರತಿನಿತ್ಯ ಸರಾಸರಿ 2000 ಮಿಲಿಯನ್ ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲಾಗಿದೆ. ಅದರಲ್ಲೂ ಏಪ್ರಿಲ್ ನಲ್ಲಿ 2,400 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಿದ್ದು ಇದು ದಾಖಲೆಯಾಗಿದೆ ಎಂದರು.

ಅದರಲ್ಲೂ ಆರ್‌ಟಿಪಿಎಸ್ ವಿದ್ಯುತ್ ಘಟಕಗಳಿಂದ ನಿಗದಿತ ಗುರಿ ಮೀರಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಆಗಿದೆ. ದಿನಕ್ಕೆ 210 ಮೆಗಾವ್ಯಾಟ್ ಸಾಮರ್ಥ್ಯದ 3ನೇ ವಿದ್ಯುತ್ ಘಟಕದಲ್ಲಿ ಏಪ್ರಿಲ್ 4ರಂದು 216 ಮೆಗಾವ್ಯಾಟ್ ಉತ್ಪಾದನೆ ಮಾಡಲಾಗಿದ್ದು, ಆ ಮೂಲಕ ಇತಿಹಾಸ ಬರೆಯಲಾಗಿದೆ. ತಾಂತ್ರಿಕ ಸಮಸ್ಯೆಗಳ ನಡುವೆಯೂ ಆರ್‌ಟಿಪಿಎಸ್‌ನ ಏಳು ವಿದ್ಯುತ್ ಘಟಕಗಳು ಸೇರಿ ಶೇ. 85ರಷ್ಟು ವಿದ್ಯುತ್ ಉತ್ಪಾದಿಸಿವೆ ಎಂದರು.

ನಗರದ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ವೈಟಿಪಿಎಸ್) 2023-24ನೇ ಸಾಲಿನ ಹಣಕಾಸು ವರ್ಷದಲ್ಲಿ 6229.250 ಮಿ.ಯೂ. ಉತ್ಪಾದಿಸಿದೆ. ಇದು ಈವರೆಗಿನ ಗರಿಷ್ಠ ಉತ್ಪಾದನೆ. ಕೇಂದ್ರ ವಿದ್ಯುಚ್ಛಕ್ತಿ ಪ್ರಾಧಿಕಾರದ 6000 ಮಿ.ಯೂ. ಗುರಿಯನ್ನು ವೈಟಿಪಿಎಸ್ ಮೀರಿದೆ. ಇನ್ನು ಬಳ್ಳಾರಿ ಉಷ್ಣ ವಿದ್ಯುತ್ ಸ್ಥಾವರ 8208.476 ಮಿ.ಯೂ ವಿದ್ಯುತ್ ಉತ್ಪಾದಿಸಿದೆ. ಸ್ಥಾವರ ಕಾರ್ಯಾರಂಭ ಮಾಡಿದ ನಂತರ ಸಾಧಿಸಿದ ಅತ್ಯಧಿಕ ಉತ್ಪಾದನೆಯ ದಾಖಲೆ ಇದಾಗಿದೆ,

ಆರ್‌ಟಿಪಿಎಸ್, ಒಂದನೇ ಘಟಕ ತೀರಾ ಹಳೆಯದು ಎಂಬ ಕಾರಣಕ್ಕೆ ಮುಚ್ಚುವುದಿಲ್ಲ. ಈ ಕುರಿತು ಊಹಾಪೋಹ ಅಷ್ಟ. ಆದರೆ ನಾವು ಈಗಾಗಲೇ ಕೆಪಿಸಿ ಬೋರ್ಡ್ ಮೀಟಿಂಗಲ್ಲಿ ತೀರ್ಮಾನ ತಗೊಂಡಿದೀವಿ ಅದನ್ನ ಸರಿ ಮಾಡಲು ಅಗತ್ಯಹಣ ಬಿಡುಗಡೆಗೂ ನಿರ್ಧರಿಸಲಾಗಿದೆ,”ಎಂದು ಹೇಳಿದರು.

oplus_0

ಕಲ್ಲಿದ್ದಲು ಕೊರತೆ ಇಲ್ಲ; ನಮ್ಮ ಸರ್ಕಾರ ಬಂದ ಮೇಲೆ ಕಲ್ಲಿದ್ದಲು ಸಮಸ್ಯೆ ಇಲ್ಲದಂತೆ ನೋಡಕೊಂಡಿದ್ದೇವೆ. ಒಂದು ತಿಂಗಳಿಗೆ ಬೇಕಾದ ಕಲ್ಲಿದ್ದಲು ಸಂಗ್ರಹದಲ್ಲಿದೆ. ಕೇಂದ್ರ ಸರ್ಕಾರದ ಸಹಭಾಗಿತ್ವದ 3 ಕಲ್ಲಿದ್ದಲು ಘಟಕಗಳಿಂದ ಕಲ್ಲಿದ್ದಲು ಬರುತ್ತಿದೆ. ಕ್ಯಾಪ್ಟಿವ್ ಮೈನಿಂಗ್‌ನಿoದಲೂ ಕಲ್ಲಿದ್ದಲು ಬರ್ತಿದೆ. ಪ್ರಸ್ತುತ 14 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹವಿದೆ ಎಂದು ಸಚಿವರು ವಿವರ ನೀಡಿದರು.

ಆರ್‌ಟಿಪಿಎಸ್, ವೈಟಿಪಿಎಸ್‌ಗೆ ಸಚಿವರ ಭೇಟಿ, ಪರಿಶೀಲನೆ; ರಾಯಚೂರಿನ ಆರ್‌ಟಿಪಿಎಸ್, ವೈಟಿಪಿಎಸ್‌ಗೆ ಇಂಧನ ಸಚಿವರು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ಬುಧವಾರ ಭೇಟಿ ನೀಡಿದರು. ಮೊದಲು ವೈಟಿಪಿಎಸ್‌ಗೆ ಭೇಟಿ ಅಧಿಕಾರಿಗಳೊಂದಿಗೆ ಸಭೆ ಮಾಡಿ, ನಂತರ ಶಕ್ತಿನಗರದ ಅತಿಥಿ ಗೃಹದಲ್ಲಿ ಊಟ ಮಾಡಿ, ಆರ್‌ಟಿಪಿಎಸ್‌ಗೆ ಭೇಟಿ ನೀಡಿದರು. ಆರ್‌ಟಿಪಿಎಸ್‌ನ ಯೂನಿಟ್-06 ಘಟಕವು ಸತತ 103 ದಿನಗಳ ಕಾಲ ಕಾರ್ಯನಿರ್ವಹಣೆ ಹಿನ್ನಲೆಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳೊAದಿಗೆ ಕೇಕ್ ಕತ್ತರಿಸುವ ಮೂಲಕ ಸಂಭ್ರಮ ಆಚರಣೆ ಮಾಡಿದರು. ಆರ್‌ಟಿಪಿಎಸ್‌ನ ವಿವಿಧ ಘಟಕಗಳಿಗೆ ಇದೇ ವೇಳೆ ಭೇಟಿ ನೀಡಿ, ಅಲ್ಲಿಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು.

oplus_0

ಇದೇ ಸಂದರ್ಭದಲ್ಲಿ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಿವರಾಜ್ ಪಾಟೀಲ್, ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಹಂಪಯ್ಯ ನಾಯಕ್, ಲಿಂಗಸೂಗೂರು ವಿಧಾನಸಭಾ ಕ್ಷೇತ್ರದ ಶಾಸಕ ಮಾನಪ್ಪ ಡಿ.ವಜ್ಜಲ್, ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ತುರುವಿನಹಾಳ್, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ್, ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅಪರ ಜಿಲ್ಲಾಧಿಕಾರಿಗಳಾದ ಡಾ.ಕೆ.ಆರ್.ದುರುಗೇಶ್ ಹಾಗೂ ಜೆಸ್ಕಾಂ, ಆರ್‌ಟಿಪಿಎಸ್, ವೈಟಿಪಿಎಸ್ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Share This Article
error: Content is protected !!
";