Ad image

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಯುಪಿಎಸ್‌ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

Vijayanagara Vani
ಬಳ್ಳಾರಿ,ಜೂ.17:
ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಯುಪಿಎಸ್‌ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.
ಆಸಕ್ತ ಆಭ್ಯರ್ಥಿಗಳು ನಿರ್ದೇಶನಾಲಯದ ಪೋರ್ಟಲ್‌ನ https://dom.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ನಗರದ ಹಜ್ ಭವನದಲ್ಲಿ 03 ತಿಂಗಳ ವಸತಿ ಸಹಿತ ಶಿಷ್ಯವೇತನದೊಂದಿಗೆ ತರಬೇತಿಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಜೂ.21 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ 0ಹತ್ತಿರದ ಮೌಲನಾ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
error: Content is protected !!
";