Ad image

ಅಂಗನವಾಡಿ ಕಾರ್ಯಕರ್ತೆರ ಸೇವೆ ಶ್ಲಾಘನೀಯ : ಶಾಸಕ ಚನ್ನಬಸಪ್ಪ

Vijayanagara Vani
ಅಂಗನವಾಡಿ ಕಾರ್ಯಕರ್ತೆರ ಸೇವೆ ಶ್ಲಾಘನೀಯ : ಶಾಸಕ ಚನ್ನಬಸಪ್ಪ
ಶಿವಮೊಗ್ಗ ಜು.11 ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಅಂಗನಾಡಿ ಕಾರ್ಯಕರ್ತೆಯರ ಪಾತ್ರ ಅಪಾರವಾಗಿದ್ದು ಅವರು ಮಾಡಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಶಾಸಕ ಚನ್ನಬಸಪ್ಪ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೋಷಣ್ ಅಭಿಯಾನ ಯೋಜನೆ ಅಡಿಯಲ್ಲಿ ಶಿಶು ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ಗುರುವಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಣೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಪೋಷಣ್ ಅಭಿಯಾನದ ಮೂಲಕ ಗರ್ಭಿಣಿಯರು ಮತ್ತು ಮಕ್ಕಳಿಗೆ ಅಪೌಷ್ಟಿಕತೆ ನಿವಾರಣೆಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿಷೇಶ ಯೋಜನೆಗಳನ್ನು ರೂಪಿಸಿದ್ದು ಅಂಗನವಾಡಿ ಕೇಂದ್ರಗಳ ಮೂಲಕ ಮಹಿಳೆಯರು,ಮಕ್ಕಳು ಗರ್ಭಿಣಿರಲ್ಲಿ ಅಪೌಷ್ಠಿಕತೆ ನಿವಾರಣೆಯೊಂದಿಗೆ ಅವರ ಬೆಳವಣಿಗೆಗಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.
ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸುವ ಮೂಲಕ ಅವರ ಕಾರ್ಯಕ್ಷಮತೆಯನ್ನು ಕಡಿಮೆಗೊಳ್ಳಿಸಿ ಹೊಸ ತಂತ್ರಜ್ಞಾನಗಳಿಗೆ ಹೊಂದಿಕೊಂಡು ಇನ್ನೂ ಹೆಚ್ಚಿನ ಸೇವೆಯನ್ನು ಸಲ್ಲಿಸಲು ಸಹಕಾರಿಯಾಗಿದೆ. ಮೊಬೈಲ್ ಗಳನ್ನು ಸದುಪಯೋಗ ಪಡಿಸಿಕೊಳ್ಳಿ ಇನ್ನೂ ಉತ್ತಮ ಕಾರ್ಯವನ್ನು ಮಾಡಿಬೇಕು ಅಂಗನವಾಡಿ ಕಾರ್ಯಕರ್ತೆಯರು ಎಂದರೆ ನಮ್ಮ ಸಮಾಜದಲ್ಲಿ ಗೌರವಯುತ ಸ್ಥಾನದಲ್ಲಿ ಗುರುತಿಸುತ್ತಾರೆ. ಕರೋನದ ಸಂದರ್ಭದಲ್ಲಿ ಜೀವದ ಹಂಗನ್ನೂ ತೊರೆದು ಸೇವೆ ಸಲ್ಲಿಸಿದ್ದಾರೆ. ಪ್ರತಿದಿನ ಮಹಿಳೆಯರ ಮಕ್ಕಳ ಆರೋಗ್ಯ ರಕ್ಷಣೆ ಕೆಲಸ ಮಾಡುತ್ತಿರುವ ನಿಮ್ಮೆಲ್ಲರ ಆರೋಗ್ಯ ಉತ್ತಮವಾಗಿರಬೇಕು ಎಂದರು.
ಶಿವಮೊಗ್ಗ ನಗರ ಪ್ರದೇಶದಲ್ಲಿ ಈಗಗಾಲೇ ಅನೇಕ ಅಂಗನವಾಡಿ ಕೇಂದ್ರಗಳನ್ನು ಸ್ವಂತ ಕಟ್ಟಡದಲ್ಲಿ ನಡೆಸಲಾಗುತ್ತಿದ್ದು ಜಾಗವಿದ್ದು ಸ್ವಂತ ಕಟ್ಟಡ ಇಲ್ಲದೇ ಇರುವ ಅಂಗನವಾಡಿ ಕೇಂದ್ರಗಳ ಮಾಹಿತಿಯನ್ನು ನೀಡಿದೆ ಕೂಡಲೇ ಸರ್ಕಾರದ ಗಮನಕ್ಕೆ ತಂದು ಹೊಸ ಕಟ್ಟಡ ನಿರ್ಮಾಣ ಮಾಡಲು ಹಣ ನೀಡುವುದಾಗಿ ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗಬೇಕಾದ ನ್ಯಾಯವನ್ನು ಒದಗಿಸಲು ನಾವು ಎಂದಿಗೂ ನಿಮ್ಮ ಜೊತೆಯಲ್ಲಿ ಇರುತ್ತೇವೆ ನಿಮ್ಮ ಯಾವುದೇ ಬೇಡಿಕೆಗಳಿಗೆ ನಾವು ಸ್ಪಂದಿಸುತ್ತೇವೆ ನೀವು ಮಾಡುವ ಸೇವೆಗೆ ತಕ್ಕ ಪ್ರತಿಫಲ ಸಿಗಬೇಕಾಗಿದೆ ಈ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಚರ್ಚಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸಿಡಿಪಿಓ ಬಿ.ಹೆಚ್ ಕೃಷ್ಣಪ್ಪ ಅವರು ಮಾತನಾಡಿ ಶಾಸಕರು ನಮ್ಮ ಇಲಾಖೆಯೊಂದಿಗೆ ಸದಾ ಜೊತೆಯಾಗಿದ್ದು ಮಹಾನಗರ ಪಾಲಿಕೆಯಿಂದ 20ಕ್ಕೂ ಹೆಚ್ಚು ಅಂಗನವಾಡಿ ಸ್ವಂತ ಕಟ್ಟಡವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಪೋಷಣ್ ಅಭಿಯಾನ ಕೇಂದ್ರ ಸರ್ಕಾರ 2018-19 ನೇ ಸಾಲಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು 2019 ರಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ನ್ ವಿತರಿಸಲಾಗಿದ್ದು ಅದು ಈಗ ಹಳೆಯದಾಗಿದೆ ಸರ್ಕಾರ ಈಗ ಹೊಸ ಮೊಬೈಲ್ ಪೋನ್ ಗಳನ್ನು ನೀಡಿದ್ದು ಶಿವಮೊಗ್ಗ ನಗರದ 163 ಅಂಗನವಾಡಿ ಕೇಂದ್ರಗಳಿಗೆ ಇಂದು ಮೊಬೈಲ್ ವಿತರಸಲಾಗಿದೆ ಈ ಮೂಲಕ ಪ್ರತಿ ನಿತ್ಯ ಹಾಜರಾತಿ, ಇಲಾಖೆಯ ವಿವಿಧ ಕೆಲಸಗಳನ್ನು ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಪಾರದರ್ಶಕವಾಗಿ ಸೇವೆ ಸಲ್ಲಿಸಲು ಸಹಕಾರ ಆಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿ ಗಂಗಾಬಾಯಿ, ಅಂಗನವಾಡಿ ಕಾರ್ಯಕರ್ತೆರು ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This Article
error: Content is protected !!
";