ಚಿತ್ರದುರ್ಗ ಜು. 11 :
ರಾಜ್ಯದ ಮಾಜಿ ಸಭಾಪತಿಗಳು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ (ಎಂ.ಎಲ್.ಸಿ) ಘಟಕದ ನಿಕಟಪೂರ್ವ ಅಧ್ಯಕ್ಷರಾದ ಎನ್. ತಿಪ್ಪಣ್ಣ (97) ಅವರು ಶುಕ್ರವಾರ ಬೆಳಿಗ್ಗೆ ನಿಧನರಾದ ಹಿನ್ನೆಲೆಯಲಿ,್ಲ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದು, ತಿಪ್ಪಣ್ಣ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಮೃತರ ಕುಟುಂಬಕ್ಕೆ, ಬಂಧುಗಳಿಗೆ ಭಗವಂತ ದಯಪಾಲಿಸಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.