Ad imageAd image

ಬಾಗಲಕೋಟೆಯಲ್ಲಿ ಒಂದೇ ದಿನ ಮೋದಿ, ಸಿದ್ದರಾಮಯ್ಯ ಪ್ರಚಾರ

khushihost
By khushihost
ಬಾಗಲಕೋಟೆಯಲ್ಲಿ ಒಂದೇ ದಿನ ಮೋದಿ, ಸಿದ್ದರಾಮಯ್ಯ ಪ್ರಚಾರ

ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ದಿನ ಪ್ರಚಾರ ಕೈಗೊಂಡಿದ್ದಾರೆ.

- Advertisement -
Ad image

ಏಪ್ರಿಲ್ 29ರಂದು ಬಾಗಲಕೋಟೆ ನವನಗರದಲ್ಲಿ ಪ್ರಧಾನಿ ಮತ್ತು ಮುಖ್ಯಮಂತ್ರಿಗಳ ಪ್ರಚಾರ ಸಭೆ ನಿಗದಿಯಾಗಿದೆ. ಏಪ್ರಿಲ್ 29ರಂದು ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಮೋದಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

ಅದೇ ದಿನ ಸಂಜೆ 6 ಗಂಟೆಗೆ ನಡೆಯುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.

Share This Article
error: Content is protected !!
";