ಕೆಎಂಆರ್‌ಸಿ ನಿಧಿಯಡಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಗಣಿ ಪ್ರದೇಶದಲ್ಲಿ ಕ್ಷಯರೋಗ ಪತ್ತೆ ಆಂದೋಲನಕ್ಕೆ ಸೂಚನೆ -ಜಿಲ್ಲಾಧಿಕಾರಿ ಟಿ.ವೆಂಕಟೇಶ್

Vijayanagara Vani
ಕೆಎಂಆರ್‌ಸಿ ನಿಧಿಯಡಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಗಣಿ ಪ್ರದೇಶದಲ್ಲಿ ಕ್ಷಯರೋಗ ಪತ್ತೆ ಆಂದೋಲನಕ್ಕೆ ಸೂಚನೆ -ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಚಿತ್ರದುರ್ಗಜುಲೈ23:
ಕೆಎಂಇಆರ್‌ಸಿ(ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ) ನಿಧಿಯಡಿ ಜಿಲ್ಲೆಯ ಗಣಿ ಬಾಧಿತ ಪ್ರದೇಶದಲ್ಲಿನ ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿರಿಸಲಾಗುವುದು. ಆಂದೋಲನದ ಮಾದರಿಯಲ್ಲಿ ಗಣಿ ಕಂಪನಿಗಳು ಸೇರಿದಂತೆ ಗಣಿ ಬಾದಿತ ಪ್ರದೇಶದಲ್ಲಿ ಕ್ಷಯರೋಗ ಪತ್ತೆ ಕಾರ್ಯಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಜಿಲ್ಲಾ ಕ್ಷಯರೋಗಾಧಿಕಾರಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕ್ಷಯರೋಗ ನಿರ್ಮೂಲನೆ ಹಾಗೂ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ (ಎಬಿಆರ್‌ಕೆ) ಯೋಜನೆಗಳ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಕ್ಷಯರೋಗ ವಾಸಿಯಾಗಬಹುದಾದ ಖಾಯಿಲೆಯಾಗಿದೆ. ಜನರಲ್ಲಿ ಕ್ಷಯರೋಗ ಬಗ್ಗೆ ಇರುವ ಕಳಂಕ ಭಾವನೆಯನ್ನು ದೂರಗೊಳಿಸಬೇಕು. ಆರಂಭದಲ್ಲಿ ಕ್ಷಯರೋಗ ಪತ್ತೆಯಾದರೆ, ಸೊಂಕು ಹರಡುವುದನ್ನು ತಪ್ಪಿಸಬಹುದು. ಜಿಲ್ಲೆಯಲ್ಲಿ ಕ್ಷಯರೋಗಿಗಳ ಮರಣ ಪ್ರಮಾಣವು ರಾಜ್ಯ ಸರಾಸರಿಗಿಂತ ಹೆಚ್ಚಿದೆ. ಇದನ್ನು ಕಡಿಮೆ ಮಾಡಬೇಕು. ಕ್ಷಯರೋಗ ಪತ್ತೆ ಮನೆ ಮನೆ ಸರ್ವೆಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಕೆಎಂಇಆರ್‌ಸಿ ಅನುದಾನದಲ್ಲಿ ಕ್ಷಯರೋಗ ಪತ್ತೆಗೆ ಬೇಕಾದ ಯಂತ್ರೋಪಕರಣಗಳ ಖರೀದಿಗೆ ಯೋಜನೆ ರೂಪಿಸಿ. ಅಗತ್ಯ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಎಸ್‌ಆರ್ ನಿಧಿಯಡಿ ಖಾಸಿಗಿ ಕಂಪನಿಗಳಿ0ದ ಯಂತ್ರೋಪಕರಣ ಪಡೆಯುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ 1024 ಕ್ಷಯರೋಗಿಗಳು ಇದ್ದಾರೆ. ಇವರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. 2023ನೇ ಸಾಲಿನಲ್ಲಿ 32735 ಜನರಿಗೆ ಕ್ಷಯರೋಗ ಪತ್ತೆ ಕಾರ್ಯ ಮಾಡಲಾಗಿದೆ.2024ರ ಜೂನ್ ವರೆಗೆ 27702 ಜನರಿಗೆ ಕ್ಷಯಪತ್ತೆ ಕಾರ್ಯ ನಡೆಸಲಾಗಿದೆ ಎಂದು ಜಿಲ್ಲಾ ಕ್ಷಯರೋಗಾಧಿಕಾರಿ ಡಾ.ಸುಧಾ.ಸಿ.ಓ ಸಭೆಯಲ್ಲಿ ಮಾಹಿತಿ ನೀಡಿದರು.
ಎಬಿಆರ್‌ಕೆ ಯೋಜನೆಯನ್ನು ಸರ್ಮಪಕವಾಗಿ ಅನುಷ್ಠಾನ ಮಾಡಬೇಕು.ಯೋಜನೆ ಫಲಾನುಭವಿಗಳು ಚಿಕತ್ಸೆಗೆ ಬರುವಾಗ ತಪ್ಪದೇ ಆಧಾರ್ ಹಾಗೂ ಪಡಿತರ ಚೀಟಿಯನ್ನು ತರುವಂತೆ ಪ್ರಚಾರ ನೀಡಬೇಕು. ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳು ನಿಗದಿ ಪಡಿಸಿದ ಕೆಲಸದ ವೇಳೆಯಲ್ಲಿ ಆಸ್ಪತ್ರೆಯಲ್ಲಿದ್ದು ರೊಗಿಗಳಿಗೆ ಚಿಕಿತ್ಸೆ ನೀಡಬೇಕು. ಯಾವುದೇ ಕಾರಣಕ್ಕೂ ಆಸ್ಪತ್ರೆ ಹೊರಗಡೆ ರೋಗಿಗಳಿಗೆ ಔಷಧ ಚೀಟಿ ಬರೆದು ಕೊಡಬಾರದು. ಜಿಲ್ಲಾ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆದವರಿಂದ ನಿಗದಿತ ನಮೂನೆ ರೂಪಿಸಿ ಹಿಮ್ಮಾಯಿತಿ ಪಡೆಯುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ರಾಷ್ಟಿçಯ ಆರೋಗ್ಯ ಅಭಿಯಾನ ಸೇರಿದಂತೆ ವಿವಿಧ ಆರೋಗ್ಯ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ ಶಿಕ್ಷಣ ಸಂವಹನ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸುವಂತೆ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಸುವರ್ಣ ಆರೋಗ್ಯ ಟ್ರಸ್ಟ್ ಜಿಲ್ಲಾ ಸಂಯೋಜಕ ಚಂದ್ರಶೇಖರ್, ಜಿ.ಪಂ.ಉಪಕಾರ್ಯದರ್ಶಿ ಕೆ.ತಿಮ್ಮಪ್ಪ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾಶಸ್ತçಚಿಕಿತ್ಸಕ ಡಾ.ರವೀಂದ್ರ.ಎಸ್.ಪಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರು ಇದ್ದರು.
WhatsApp Group Join Now
Telegram Group Join Now
Share This Article
error: Content is protected !!