ಧಾರವಾಡ ಜು.04: ಧಾರವಾಡ ಜಿಲ್ಲೆಯಲ್ಲಿ ಪ್ರತಿ ಶುಕ್ರವಾರವನ್ನು ಏಡೀಸ್ ಸೊಳ್ಳೆ ನಿರ್ಮೂಲನಾ ಶುಕ್ರವಾರವಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ನಾಳೆ ಆರೋಗ್ಯ ಇಲಾಖೆ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಂದ ಈಡೀಸ್ ಲಾರ್ವ ನಿರ್ಮೂಲನ ಅಭಿಯಾನ ಹಾಗೂ ಡೆಂಗ್ಯೂ ವಿರುದ್ಧ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ.
ಜಾಥಾವನ್ನು ಕೆಲಗೇರಿ ಗ್ರಾಮದ ಕಲ್ಮೇಶ್ವರ ದೇವಸ್ಥಾನದ ಹತ್ತಿರವಿರುವ ಸಮುದಾಯ ಭವನದಿಂದ(ಅಂಗನವಾಡಿ ನಂ.2) ನಾಳೆ ಜು.05 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಚಾಲನೆ ನೀಡುವರು.
ಈಡಿಸ್ ಲಾರ್ವ ನಿರ್ಮೂಲನ ಕಾರ್ಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಳ್ಳುವರು.
ರಾಜ್ಯದ್ಯಂತ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಸೂಚನೆಯಂತೆ ಡೆಂಗ್ಯೂ ತಡೆಗಟ್ಟುವಿಕೆ ಹಾಗೂ ನಿಯಂತ್ರಣವು ಸರ್ಕಾರದ ಎಲ್ಲ ಇಲಾಖೆಗಳ ಹಾಗೂ ಸಮುದಾಯದ ಜವಾಬ್ದಾರಿ ಆಗಿದ್ದು ಈ ನಿಟ್ಟಿನಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಹಾಗೂ ಸಮುದಾಯದೊಂದಿಗೆ ಸೇರಿ ಈಡಿಸ್ ಲಾರ್ವಾ ನಿರ್ಮೂಲನಾ ಕಾರ್ಯವನ್ನು ಜಿಲ್ಲೆಯಲ್ಲಿ ಸಮರೋಪಾದಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.