Ad image

ಮೂಡ ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸಿದನೆ.ಶ್ರೀಮತಿ ಪಾರ್ವತಿ ಸಿದ್ದರಾಮಯ್ಯ .

Vijayanagara Vani
ಮೂಡ ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸಿದನೆ.ಶ್ರೀಮತಿ ಪಾರ್ವತಿ ಸಿದ್ದರಾಮಯ್ಯ .

ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆಂದು  ಅವರು ತಮ್ಮ ಮುಖಪುಟದಲ್ಲಿ ಅವರ ಧರ್ಮಪತ್ನಿಪಾರ್ವತಿ ಅವರು ಬರೆದ ಪತ್ರದ ಕುರಿತು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದು ಹೀಗೆ.

 

ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ.ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು.

ಶ್ರೀ ಮತಿ ಪಾರ್ವತಿಅವರ ಪತ್ರ

 

 

ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ.

ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ
ನನಗೆ ವಿಷಾದ ಇದೆ.

ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ.ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನರು ತಮ್ಮ ಮುಖಪುಟದಲ್ಲಿ ಹಂಚಿಕೊಡಿದ್ದಾರೆ.

#ಮುಡಾ #ದ್ವೇಷರಾಜಕಾರಣ
#ಸತ್ಯಮೇವಜಯತೆ

Share This Article
error: Content is protected !!
";