ನವದೆಹಲಿ, ಜುಲೈ 23: ಮಂಗಳವಾರ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದರು
ಬಜೆಟ್ ಭಾಷಣದಲ್ಲಿ ಕೇಂದ್ರ ಸರ್ಕಾರ ಸಣ್ಣ ಉದ್ದಿಮೆದಾರರಿಗೆ ಸಿಹಿಸುದ್ದಿ ನೀಡಿದೆ. ಲೋಕಸಭೆ ಚುನಾವಣೆ 2024 ಮುಗಿದ ಬಳಿಕ ನರೇಂದ್ರ ಮೋದಿ ಸರ್ಕಾರ ಮಂಡನೆ ಮಾಡುತ್ತಿರುವ ಮೊದಲ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ಬಜೆಟ್ ಭಾಷಣದಲ್ಲಿ ಸಚಿವರು, ‘ಪ್ರಧಾನಮಂತ್ರಿ ಮುದ್ರಾ ಯೋಜನೆ’ಯ ಸಾಲದ ಮಿತಿಯನ್ನು 20 ಲಕ್ಷಕ್ಕೆ ಏರಿಕೆ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದರು. ಸದ್ಯ ಯೋಜನೆಯಡಿ 10 ಲಕ್ಷ ರೂ. ತನಕ ಸಾಲ ಪಡೆಯಲು ಅವಕಾಶವಿದೆ.
ಕೇಂದ್ರ ಸರ್ಕಾರ 2015ರ ಏಪ್ರಿಲ್‌ನಲ್ಲಿ ‘ಪ್ರಧಾನ ಮಂತ್ರಿ ಮುದ್ರಾ ಯೋಜನೆ’ಯನ್ನು ಆರಂಭಿಸಿತು. ಕಾರ್ಪೊರೇಟ್ ಅಲ್ಲದ, ಕೃಷಿಯೇತರ ಸಣ್ಣ ಮತ್ತು ಅತಿ ಸಣ್ಣ ಉದ್ಯಮಿಗಳಿಗೆ 10 ಲಕ್ಷ ರೂ. ತನಕ ಸುಲಭವಾಗಿ ಸಾಲ ನೀಡಲು ಈ ಯೋಜನೆ ಆರಂಭಿಸಲಾಗಿದೆ.