Ad image

ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ

Vijayanagara Vani
ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ
ಶಿವಮೊಗ್ಗ, ಜೂನ್ 24,  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜೂ.27 ರ ಬೆಳಗ್ಗೆ 10.30 ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವರು ನೆರವೇರಿಸುವರು. ಶಾಸಕರಾದ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು, ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಜಿಲ್ಲೆಯ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಜನಪ್ರತಿನಿಧಿಗಳು, ಪಾಲಿಕೆ ಮಹಾಪೌರರು, ವಿವಿಧ ನಿಗಮ/ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಒಕ್ಕಲಿಗರ ಸಂಘಗಳ ಮುಖಂಡರು/ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು ಹಾಗೂ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಿವಮೊಗ್ಗ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಎಂಬಿ.ಎ ವಿಭಾಗದ ಸಹ ಪ್ರಾಧ್ಯಾಪಕ ಡಾ. ಗಿರಿಧರ್ ಕೆ.ವಿ.ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.
Share This Article
error: Content is protected !!
";