ಬಳ್ಳಾರಿ,ಡಿ.23:
ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಡಿ.24ರಂದು ಬೆಳಿಗ್ಗೆ 10 ಗಂಟೆಗೆ ಅಲ್ಲಿಪುರ ರಸ್ತೆಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಕಾನೂನು ಮಾಪನ ಶಾಸ್ತç ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತಾ ಇಲಾಖೆ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ತಿಪ್ಪೇಸ್ವಾಮಿ.ಎನ್ ಅವರು ಘನ ಉಪಸ್ಥಿತಿ ಇರುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾದ ರುದ್ರೇಶ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ, ಕಾನೂನು ಮಾಪನ ಶಾಸ್ತçದ ಸಹಾಯಕ ನಿಯಂತ್ರಕರಾದ ಅಮೃತಾ ಪಿ.ಚವ್ಹಾಣ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಮಬ್ರಹ್ಮಂ, ಹಿರಿಯ ವಕೀಲರಾದ ಅಂಕಲಯ್ಯ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸಕೀನ ಅವರು ಸೇರಿದಂತೆ ಇತರರು ಉಪಸ್ಥಿತರಿರುವರು.
ಹಿರಿಯ ವಕೀಲರಾದ ಎನ್.ಪ್ರಕಾಶ್ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.