Ad image

ರಾಷ್ಟ್ರ ವಿಮೋಚನೆಯೊಂದೇ ನನ್ನ ಗುರಿ ..ಭರತದ ರಾಷ್ಟ್ರಪುತ್ರ “ಭಗತ್ ಸಿಂಗ್”

Vijayanagara Vani
ರಾಷ್ಟ್ರ ವಿಮೋಚನೆಯೊಂದೇ ನನ್ನ ಗುರಿ ..ಭರತದ ರಾಷ್ಟ್ರಪುತ್ರ “ಭಗತ್ ಸಿಂಗ್”

ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು

ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ. ಅವರ ತಾಯಿ ಶ್ರೀಮತಿ ವಿದ್ಯಾವತಿ ಮತ್ತು ಜೀವ ವಿಮಾ ಕಂಪನಿಯಲ್ಲಿ ಏಜೆಂಟರಾಗಿ ವೃತ್ತಿ ಮಾಡುತ್ತಿದ್ದ ತಂದೆ ಕಿಶನ್ ಸಿಂಗ್. ಭಗತ್ ಮೇಲೆ ಅತೀವ ಪ್ರಭಾವವನ್ನು ಬೀರಿದ್ದವರೆಂದರೆ ಅವರ ಚಿಕ್ಕಪ್ಪ ಅಜಿತ್ ಸಿಂಗ್.

ಈಗಾಗಲೇ ಅಜಿತ್ ಸಿಂಗರು ಉಗ್ರ ಭಾಷಣಕಾರರಾಗಿದ್ದು ರೈತರ ನಡುವೆ ಹಲವಾರು ಚಳುವಳಿಗಳನ್ನು ಸಂಘಟಿಸಿ ಬ್ರಿಟೀಷರು ಬಂಧನಕ್ಕೀಡು ಮಾಡಲು ಬಲೆ ನೇಯ್ದಿದ್ದರೂ ಸಿಗದೆ ಅವರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು. ಇದರೊಂದಿಗೆ ಜಲಿಯನ್ ವಾಲಾಬಾಗ್‌ನಲ್ಲಿ ಬ್ರಿಟೀಷರು ನಡೆಸಿದ ಮಾರಣಹೋಮದಿಂದುಂಟಾದ ರಕ್ತದ ಕೆಂಪು ಕಲೆ, ಅವರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಬ್ಬಿಸಿ ಮನಸ್ಸಿನಲ್ಲಿ ಹೋರಾಟದ ಚಿತ್ತಾರ ಮೂಡಿಸಿತ್ತು.

ಪಂಜಾಬಿನ ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಲಾಹೋರ್ ಪಿತೂರಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕರ್ತಾರ್ ಸಿಂಗ್ ಸರಭ್ ರವರನ್ನು 1915 ರಲ್ಲಿ ಅವರ 20 ನೇ ವಯಸ್ಸಿನಲ್ಲೇ ನೇಣಿಗೇರಿಸಲಾಗಿತ್ತು.”ರಾಷ್ಟ್ರ ವಿಮೋಚನೆಯೊಂದೇ ನನ್ನ ಗುರಿ. ಯಾವುದೇ ವ್ಯಕ್ತಿ, ರಾಷ್ಟ್ರ, ಧರ್ಮ ಅಥವಾ ಜನಾಂಗದ ಮೇಲೆ ದ್ವೇಷ ಸಾಧಿಸಲು ನಾನಾವುದನ್ನೂ ಮಾಡಿಲ್ಲ. ನನಗೆ ಬೇಕಾಗಿರುವುದೊಂದೆ – ಸ್ವಾತಂತ್ರ್ಯ. ಅದೊಂದೇ ನನ್ನ ಕನಸು” ಎಂಬ ಸರಭ್‌ರ ಕೊನೆಗಾಲದ ಮಾತುಗಳು ಅವರಲ್ಲಿ ಕ್ರಾಂತಿಯ ಉದ್ದೀಪನ ಹಚ್ಚಿದ್ದವು. ಇದು ಭಗತ್‌ರನ್ನು ಮೈನವಿರೇಳಿಸಿ ಸಾವಿಗೇ ಸವಾಲು ಹಾಕುವಂತಹ ಗುಣವನ್ನು ಮೈಗೂಡುವಂತೆ ಮಾಡಿತ್ತು.

ಭಗತ್ ಸಿಂಗ್ ಎಂದರೆ ಅಪ್ರತಿಮ ದೇಶಪ್ರೇಮಿ. ಬಹಳಷ್ಟು ಮನಸ್ಸನ್ನು ಗೆದ್ದ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ. ಹೌದು, ಬ್ರಿಟಿಷರ ನೇಣಿಗೆ ನಗುನಗುತ್ತಲೆ ಕೊರಳೊಡ್ಡಿದ ಭಾರತದ ಏಕೈಕ ಕ್ರಾಂತಿಕಾರ ಎಂದರೆ ತಪ್ಪಾಗಲ್ಲ. ಭಗತ್ ಸಿಂಗ್ ಜನಿಸಿದ್ದು ಸೆಪ್ಟೆಂಬರ್ 28 , 1907 ರಲ್ಲಿ, ಇಂದು ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 117ನೇ ಜನ್ಮದಿನ. ಈ ಹಿನ್ನಲೆಯಲ್ಲಿ ಇಡೀ ದೇಶದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಲಾಗುತ್ತದೆ.

ಮಕ್ಕಳಿಂದ ಹಿಡಿದು ಹಿರಿಯರವರೆಗೂ ಭಾರತದ ಕ್ರಾಂತಿಕಾರಿ ನಾಯಕ ಯಾರು ಎಂದು ಕೇಳಿದರೆ ಅವರ ಬಾಯಿಂದ ಬರುವ ಹಹೆಸರು ಅದುವೇ ಕೆಚ್ಚೆದೆಯ ಹೋರಾಟಗಾರ ಭಗತ್ ಸಿಂಗ್. ಇಂದು ಭಾರತದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರ 117 ನೇ ಜನ್ಮ ದಿನ. ಭಗತ್ ಸಿಂಗ್ ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆ ಅಗಾಧವಾದದ್ದು. ತನ್ನ ಧೈರ್ಯದಿಂದಲೇ ಬ್ರಿಟಿಷರ ಎದೆಯಲ್ಲಿ ನಡುಕ ಹುಟ್ಟಿಸಿ, ದೇಶಕ್ಕಾಗಿಯೇ 23ನೇ ವಯಸ್ಸಿನಲ್ಲೇ ವೀರಮರಣ ಹೊಂದಿದ ಕ್ರಾಂತಿಕಾರಿ ಹೋರಾಟಗಾರರೆನಿಸಿಕೊಂಡವರು.

ಪ್ರೀತಿ ಯಾವಾಗಲೂ ಮನುಷ್ಯನ ಗುಣವನ್ನು ಹೆಚ್ಚಿಸುತ್ತದೆ. ಅದು ಆತನನ್ನು ಎಂದಿಗೂ ಕಡಿಮೆ ಮಾಡುವುದಿಲ್ಲ, ಪ್ರೀತಿಯನ್ನು ಪ್ರೀತಿಯಿಂದ ಒದಗಿಸಿ.
* ದೇಶಕ್ಕಾಗಿ ಕೆಲಸ ಮಾಡುವಾಗ ವೈಯಕ್ತಿಕ ಕೆಲಸಗಳನ್ನು ದೂರವಿಡಿ. ನಿಮ್ಮ ಸುಖದ ಕನಸನ್ನು ಭಗ್ನಗೊಳಿಸಿ. ಆಗ ಜಯಶಾಲಿಯಾಗುತ್ತೀರಿ.
* ನಾನು ಮನುಷ್ಯ ಮತ್ತು ಮಾನವಕುಲದ ಮೇಲೆ ಪರಿಣಾಮ ಬೀರುವ ಎಲ್ಲವೂ ನನಗೆ ಸಂಬಂಧಿಸಿದೆ.
* ಕ್ರಾಂತಿಯ ಖಡ್ಗವು ಆಲೋಚನೆಗಳ ಕಲ್ಲಿನ ಮೇಲೆ ಹರಿತವಾಗಿದೆ-ಭಗತ್ ಸಿಂಗ್ ತನ್ನ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯದಲ್ಲಿ, ಭಾರತದ ಸ್ವಾತಂತ್ರ್ಯ ಹೋರಾಟ.

 

Share This Article
error: Content is protected !!
";