ಶಿವಮೊಗ್ಗ, ಆಗಸ್ಟ್ 26,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮೇಜರ್ ಧ್ಯಾನ್‌ಚಂದ್ ಚಂದ್‌ರವರ ಜನ್ಮ ದಿನಾಚರಣೆಯ ಅಂಗವಾಗಿ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನ ಆಯೋಜಿಸಿದ್ದು, ಈ ಕಾರ್ಯಕ್ರಮದ ಪ್ರಯುಕ್ತ ನಗರದ ವಿವಿಧ ಕ್ರೀಡಾಂಗಣದಲ್ಲಿ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 6.30 ರಿಂದ ನೆಹರೂ ಕ್ರೀಡಾಂಗಣದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳಿಯರಿಗೆ 5 ಕಿ.ಮೀ. ಮ್ಯಾರಾಥಾನ್ , ಬೆಳಗ್ಗೆ 9.00 ರಿಂದ ವಾಜಪೇಯಿ ಕ್ರೀಡಾಂಗಣದಲ್ಲಿ 16 ವರ್ಷ ಒಳಪಟ್ಟು ಪುರುಷರು ಮತ್ತು ಮಹಿಳಿಯರಿಗೆ (ಪೆನಾಲ್ಟಿ ಶೂಟೌಟ್) ಹಾಕಿ, ಬೆಳಗ್ಗೆ 11.00 ರಿಂದ ಗೋಪಾಳ ಕ್ರೀಡಾ ಸಂಕೀರ್ಣದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರಿಗೆ ಟೇಬಲ್ ಟೆನ್ನಿಸ್ ಹಾಗೂ ಸಂಜೆ 4.00 ರಿಂದ ನೆಹರೂ ಕ್ರೀಡಾಂಗಣದಲ್ಲಿ ಮಹಿಳೆಯರಿಗೆ ಹಗ್ಗ ಜಗ್ಗಾಟ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಮ್ಯಾರಾಥಾನ್ ವಿಜೇತರಿಗೆ ಪ್ರಥಮ ಬಹುಮಾನ ರೂ. 4,000/-, ದ್ವಿತಿಯ ರೂ. 3,000/- ತೃತೀಯ ರೂ. 2,000/- ಹಾಗೂ ಎರಡು ಸಮಾಧಾನಕರ ತಲಾ ರೂ.1000/- ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಇತರೆ ಕ್ರೀಡಾ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಪಾರಿತೋಷಕ ನೀಡಲಾಗುವುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ ಇವರನ್ನು ಸಂಪರ್ಕಿಸುವುದು.