ಬಳ್ಳಾರಿ,ಸೆ.04
ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 08 ರಂದು ಮಧ್ಯಾಹ್ನ 03 ಗಂಟೆಗೆ ನಗರದ ಅನಂತಪುರ ರಸ್ತೆಯಲ್ಲಿರುವ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಕರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.