Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನವೆಂಬರ್.25 ರಂದು ವಿಕಲಚೇತನರ ಜಿಲ್ಲಾ ಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ.

ವಿಜಯನಗರ(ಹೊಸಪೇಟೆ), ನವೆಂಬರ್.18 : ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ತ ನವೆಂಬರ್.25 ರಂದು, ಬೆಳಿಗ್ಗೆ 11 ಗಂಟೆಗೆ, ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಆಸಕ್ತ ಸ್ಪರ್ಧಾಳುಗಳು ನೊಂದಾಯಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ ತಿಳಿಸಿದ್ದಾರೆ.
ಡಿ.03 ರಂದು ಆಚರಿಸುವ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಜಯನಗರ ಜಿಲ್ಲಾ ವ್ಯಾಪ್ತಿಯ ವಿಕಲಚೇತನರಿಗೆ ವಿಶೇಷವಾಗಿ ಕ್ರೀಡಾಕೂಟಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನವೆಂಬರ್.18 ರಿಂದ ನವೆಂಬರ್.24 ರವರೆಗೆ ಆಸಕ್ತ ಸ್ಪರ್ಧಾಳುಗಳು ತಮ್ಮ ಹೆಸರನ್ನು ಆಯಾ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಹತ್ತಿರ ನೊಂದಾಯಿಸಬಹುದಾಗಿದೆ. ಕ್ರೀಡೆ ಮತ್ತು ಸ್ಪರ್ಧೆಗಳಲ್ಲಿ ಒಬ್ಬ ವ್ಯಕ್ತಿಯು ಒಂದರಲ್ಲಿ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ವೈಯಕ್ತಿಕ ಕ್ರೀಡೆಗಳು : ದೈಹಿಕ ಅಂಗವಿಕಲರಿಗೆ ಗುಂಡು ಎಸೆತ, ಜಾವಲಿನ್ ಥ್ರೋ ಮತ್ತು ಬಗಲುಗೋಲು ಓಟ. ದೃಷ್ಟಿದೋಷವುಳ್ಳವರಿಗೆ ಕೇನ್ ರೇಸ್ ಮತ್ತು ಗುಂಡು ಎಸೆತ. ಶ್ರವಣ ದೋಷವುಳ್ಳವರಿಗೆ 100 ಮೀ.ಓಟ, ಗುಂಡು ಎಸೆತ ಮತ್ತು ರಿಂಗ್ ಎಸೆತ. ಬುದ್ದಿ ಮಾಂಧ್ಯರಿಗೆ ಮ್ಯೂಜಿಕಲ್ ಚೇರ್ ಮತ್ತು ಚೆಂಡು ಎಸೆತ.
ಗುಂಪು ಕ್ರೀಡೆಗಳು : ವಿಕಲಚೇತನರ ಗುಂಪು ಕ್ರೀಡಗಳಲ್ಲಿ ಕ್ರೀಕೆಟ್ (ಸಿಟ್ಟಿಂಗ್), ಕ್ರೀಕೆಟ್ (ಸ್ಟಾö್ಯಂಡಿಗ್) ಮತ್ತು ಕಬಡ್ಡಿ.
ಸಾಂಸ್ಕೃತಿಕ ಸ್ಪರ್ಧೆಗಳು : ದೈಹಿಕ ಅಂಗವಿಲಕರಿಗೆ ಮತ್ತು ದೃಷ್ಟಿದೋಷವುಳ್ಳವರಿಗೆ ಜಾನಪದ ಮತ್ತು ಭಾವಗೀತೆ. ಶ್ರವಣ ದೋಷವುಳ್ಳವರಿಗೆ ಚಿತ್ರಕಲಾ ಸ್ಪರ್ಧೆ. ಬುದ್ದಿ ಮಾಂಧ್ಯರಿಗೆ ಫ್ಯಾನ್ಸಿ ಡ್ರೆಸ್ (ವೇಷ ಭೂಷಣ).
ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿ ವಿಆರ್‌ಡ್ಲೂ, ನಗರಸಭೆ ಮತ್ತು ಪಟ್ಟಣ ಪಂಚಾಯಿತಿಯಲ್ಲಿ ಯುಆರ್‌ಡ್ಲೂ ಮತ್ತು ತಾಲೂಕು ಪಂಚಾಯಿತಿಯಲ್ಲಿ ಎಂಆರ್‌ಡ್ಲೂ ಇವರನ್ನು ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ, ಅಗಾಫೆ ಎಜಿ ಪ್ರಾರ್ಥನಾಲಯ ಎದುರು ರಸ್ತೆ, ಡಿ.ಸಿ. ರವಿ ಸಿವಿಲ್ ಇಂಜಿನಿಯರ್ ಕಟ್ಟಡ ಅಮರಾವತಿ ಹೊಸಪೇಟೆ, ಇವರನ್ನು ಕಚೇರಿಯ ಅವಧಿಯಲ್ಲಿ ಸಂಪರ್ಕಿಸಬೇಕೆAದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ