Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಪಿ.ಎಂ. ಕಿಸಾನ್ ಯೋಜನೆ: ಹಣ ಪಡೆಯಲು ರೈತರಿಗೆ ಬಯೋಮೆಟ್ರಿಕ್ ಇ-ಕೆವೈಸಿ ಕಡ್ಡಾಯ

ಶಿವಮೊಗ್ಗ, ಆ, 24(
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್) ಯೋಜನೆಯಡಿ ಪ್ರೋತ್ಸಾಹಧನವನ್ನು ನಿರಂತರವಾಗಿ ಪಡೆಯಲು ಜಿಲ್ಲೆಯ ಎಲ್ಲಾ ಅರ್ಹ ರೈತರು ಪ್ರತಿ ವರ್ಷ ಬಯೋಮೆಟ್ರಿಕ್ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, 2019 ರ ಫೆಬ್ರವರಿ 1ರ ಪೂರ್ವದಲ್ಲಿ ಭೂ ಒಡೆತನ ಹೊಂದಿರುವ ಪ್ರತಿ ಅರ್ಹ ಸಣ್ಣ, ಅತಿಸಣ್ಣ, ಮಧ್ಯಮ ಮತ್ತು ದೊಡ್ಡ ರೈತ ಕುಟುಂಬಗಳಿಗೆ ವರ್ಷಕ್ಕೆ ರೂ. 6,000/- ಪ್ರೋತ್ಸಾಹಧನವನ್ನು ಪ್ರತಿ 4 ತಿಂಗಳಿಗೊಮ್ಮೆ 3 ಕಂತುಗಳಲ್ಲಿ (ತಲಾ ರೂ.2,000/-) ನೇರವಾಗಿ ಖಾತೆಗೆ ಜಮೆ ಮಾಡಲಾಗುತ್ತಿದೆ. ಈ ಹಣ ಪಾವತಿಯನ್ನು ಮುಂದುವರಿಸಲು 'ಫ್ರೂಟ್ಸ್' ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಅಗ್ರಿಸ್ಟ್ಯಾಕ್ ಯೋಜನೆ ಅಡಿ ಗುರುತಿನ ಸಂಖ್ಯೆಯನ್ನು ಸೃಜಿಸುವುದು ಕಡ್ಡಾಯಗೊಳಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 1,40,366 ಫಲಾನುಭವಿಗಳಿದ್ದು, ಇದರಲ್ಲಿ 1,40,256 ರೈತರ ಬಯೋಮೆಟ್ರಿಕ್ ಇ-ಕೆವೈಸಿ ಪ್ರಕ್ರಿಯೆ ಇನ್ನೂ ಬಾಕಿ ಉಳಿದಿದೆ.
ತಾಲೂಕುವಾರು ಬಾಕಿ ವಿವರ: ಶಿವಮೊಗ್ಗ 18,565, ಭದ್ರಾವತಿ: 19,420, ತೀರ್ಥಹಳ್ಳಿ 16,716, ಸಾಗರ 20,416, ಹೊಸನಗರ 13,134, ಶಿಕಾರಿಪುರ 25,836, ಸೊರಬ 26,169.
ರೈತರು ಸಮೀಪದ ಸಿಎಸ್‌ಸಿ ಕೇಂದ್ರಗಳಿಗೆ ಭೇಟಿ ನೀಡಿ ಬೆರಳಚ್ಚು/ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಮಾಡಿಸಬಹುದು.
ಜಾಗೂ ಕೇಂದ್ರ ಸರ್ಕಾರದ 'PMKISAN e-KYC through FaceRecognition App' ಮೂಲಕ ಮುಖ (ಫೇಸ್) ದೃಢೀಕರಣದ ಆಧಾರದಲ್ಲಿ ರೈತ ಸಂಪರ್ಕ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ಆದ್ದರಿಂದ, ಫಲಾನುಭವಿ ರೈತರು ಕೂಡಲೇ ತಮ್ಮ ಆಧಾರ್ ಕಾರ್ಡ್‌ನೊಂದಿಗೆ ಹತ್ತಿರದ ಸಿಎಸ್‌ಸಿ ಕೇಂದ್ರ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಯೋಜನೆಯ ಸೌಲಭ್ಯವನ್ನು ಮುಂದುವರಿಸಬೇಕಾಗಿ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ