Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಜಿಲ್ಲಾದ್ಯಂತ ಅನಧಿಕೃತ ಗೋವು, ಒಂಟೆಗಳ ಸಾಗಾಣಿಕೆ ಹಾಗೂ ವಧೆ ಕಟ್ಟುನಿಟ್ಟಾಗಿ ನಿಷೇಧ

ಬಳ್ಳಾರಿ,ಮೇ 28
ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ದೇಶಾದ್ಯಂತ ಅನಧಿಕೃತ ಗೋವು ಮತ್ತು ಒಂಟೆಗಳ ಸಾಗಾಣಿಕೆ ಹಾಗೂ ವಧೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬಕ್ರೀದ್ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ, ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಂಬ0ಧಪಟ್ಟ ಎಲ್ಲಾ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಇರುವ ಎಲ್ಲಾ ಚೆಕ್‌ಪೋಸ್ಟ್ಗಳಲ್ಲಿ ಪಶುಸಂಗೋಪನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿದ್ದು, ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ.
**ಸಾರ್ವಜನಿಕರಲ್ಲಿ ಮನವಿ ಮತ್ತು ಸಹಾಯವಾಣಿ:**
ಜಿಲ್ಲೆಯಲ್ಲಿ ಎಲ್ಲಿಯಾದರೂ ಅಕ್ರಮವಾಗಿ ಗೋವು ಅಥವಾ ಒಂಟೆಗಳ ಸಾಗಾಣಿಕೆ ಮತ್ತು ವಧೆ ಮಾಡುವುದು ಕಂಡುಬAದಲ್ಲಿ, ಸಾರ್ವಜನಿಕರು ತಕ್ಷಣವೇ ಪಶುಸಂಗೋಪನಾ ಇಲಾಖೆ- 08392-275146, ಪೊಲೀಸ್ ಇಲಾಖೆ (ತುರ್ತು ಸಂಖ್ಯೆ) 112 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ನಿಯಮಗಳ ಪಾಲನೆಗಾಗಿ ಎಲ್ಲಾ ಸಮುದಾಯದ ಧಾರ್ಮಿಕ ಮುಖಂಡರು ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲಾದ್ಯಂತ ಅನಧಿಕೃತ ಗೋವು, ಒಂಟೆಗಳ ಸಾಗಾಣಿಕೆ ಹಾಗೂ ವಧೆ ಕಟ್ಟುನಿಟ್ಟಾಗಿ ನಿಷೇಧಬಳ್ಳಾರಿಯಲ್ಲಿ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಉದ್ಘಾಟನೆ ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತ: ಎಡಿಸಿ ಮಹಮ್ಮದ್ ಝುಬೇರ್.ಎನ್ರಾಜ್ಯಮಟ್ಟದ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಅರ್ಜಿ ಆಹ್ವಾನಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ಅರ್ಜಿ ಆಹ್ವಾನವಿಶ್ವವಿದ್ಯಾಲಯಗಳು ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡಲು ಮುಂದಾಗಬೇಕು: ಡಿಸಿ ನಾಗೇಂದ್ರ ಪ್ರಸಾದ್.ಕೆ ವಿಶ್ರೀಕೃ ವಿವಿಯಲ್ಲಿ ಎರಡು ದಿನಗಳ ವಿಜ್ಞಾನ ಪ್ರದರ್ಶನ ಮೇಳಕ್ಕೆ ಚಾಲನೆಉಪ್ಪಾರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗಲಿ: ಭಗೀರಥ ಪೀಠಾಧ್ಯಕ್ಷ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ ಆಗ್ರಹಬಳ್ಳಾರಿ: ಎಲ್ಲಾ ಸಂಸ್ಥೆಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ: ತಪ್ಪಿದರೆ ರೂ.50 ಸಾವಿರ ದಂಡ, ಲೈಸೆನ್ಸ್ ರದ್ದುಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ – ಪತ್ತೆಗೆ ಮನವಿ* ಸತತ 2 ಗಂಟೆ ಸಮಯ ಅಂಗನವಾಡಿಗಳಲ್ಲಿನ ದಾಖಲಾತಿ ಪರಿಶೀಲನೆ * ಕಿಮ್ಸನಲ್ಲಿ ರೋಗಿಗಳಿಗೆ ಕೊಡುವ ಆಹಾರದ ಗುಣಮಟ್ಟ ಪರಿಶೀಲನೆ * ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ, ಸದಸ್ಯ ಮಾರುತಿ ಎಂ. ದೊಡ್ಡಲಿಂಗಣ್ಣವರ ಅವರಿಂದ ಕಾರ್ಯಾಚರಣೆಚರಿತ್ರೆ ಅರಿಯಲು ವಸ್ತುಸಂಗ್ರಹಾಲಯಗಳು ಸಹಕಾರಿ: ಟಿ.ಜಿ.ವಿಠ್ಠಲ