ಬಳ್ಳಾರಿ,ಸೆ.01
ಕರ್ನಾಟಕ ಸರ್ಕಾರದ ಇ-ಆಡಳಿತ ಇಲಾಖೆಯ ಇಡಿಸಿಎಸ್ ನಿರ್ದೇಶನಾಲಯದ ನಿರ್ದೇಶನದಂತೆ, ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ‘ಗ್ರಾಮ ಒನ್’ ನಾಗರೀಕ ಸೇವಾ ಕೇಂದ್ರಗಳ ಫ್ರಾಂಚೈಸಿಗಳ ನೇಮಕಕ್ಕೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಸಂಡೂರು ತಾಲೂಕಿನ ವಡ್ಡು ಗ್ರಾಮ ಪಂಚಾಯಿತಿ ಹಾಗೂ ಬಳ್ಳಾರಿ ತಾಲೂಕಿನ ಬಸರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದೊAದು ಗ್ರಾಮ ಒನ್ ಕೇಂದ್ರಗಳ ಮರು-ಅಧಿಸೂಚನೆ ಖಾಲಿ ಹುದ್ದೆಗಳಿದ್ದು, ಒಟ್ಟು 2 ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ವೆಬ್‌ಸೈಟ್ ಲಿಂಕ್ https://Sevasindhuservices.karnataka.gov.in/directApply.do?serviceId=2631 ಲಿಂಕ್ ಗೆ ಭೇಟಿ ನೀಡಬಹುದಾಗಿದೆ.
ಆಸಕ್ತ ನಾಗರಿಕರು ನಿಗದಿತ ದಿನಾಂಕದೊಳಗೆ ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
---------