Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ಉಪನ್ಯಾಸ ಸರಣಿ ವಿದ್ಯಾರ್ಥಿಗಳು ಜ್ಞಾನ ವೃದ್ಧಿಸಿಕೊಳ್ಳಿ: ಪ್ರೊ.ಜಿ.ಪಿ ದಿನೇಶ್






ಬಳ್ಳಾರಿ,ನ.29

ಶೈಕ್ಷಣಿಕ ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಉಪನ್ಯಾಸಗಳಲ್ಲಿ ಭಾಗವಹಿಸುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾದ ಪ್ರೊ.ಜಿ.ಪಿ ದಿನೇಶ್ ಅವರು ಹೇಳಿದರು.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತç ವಿಭಾಗದಲ್ಲಿ ‘ರಾಸಾಯನಿಕ ವಿಜ್ಞಾನದ ಇತ್ತೀಚಿನ ಪ್ರವೃತ್ತಿಗಳ ಕುರಿತು ಎರಡು ದಿನಗಳ ಹಳೆಯ ವಿದ್ಯಾರ್ಥಿಗಳ ಉಪನ್ಯಾಸ ಸರಣಿಗಳು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಉಪನ್ಯಾಸ ಸರಣಿಗಳಿಂದ ಸಮಗ್ರ ವಾತಾವರಣವನ್ನು ಒದಗಿಸಿಕೊಳ್ಳಬಹುದು. ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಪ್ರಸ್ತುತ ವಿದ್ಯಾರ್ಥಿ ಹಾಗೂ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಿದಂತಾಗುತ್ತದೆ. ಸಮಾಜಕ್ಕೆ ಶೈಕ್ಷಣಿಕ ಸೇವೆಯನ್ನು ಒದಗಿಸುವ ಮೂಲಕ ಜವಾಬ್ದಾರಿಯುತ ಸ್ಥಾನ ಪಡೆಯಬಹುದು ಎಂದು ಮಾತನಾಡಿದರು.

ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಎಮ್ ಸಾಲಿ ಮಾತನಾಡಿ, ಹಳೆಯ ವಿದ್ಯಾರ್ಥಿಗಳ ಸಂಘವು ವಿದ್ಯಾರ್ಥಿ ಮತ್ತು ಶಿಕ್ಷಣ ಸಂಸ್ಥೆಯ ನಡುವೆ ಬಲವಾದ ಬಾಂಧವ್ಯ ಸ್ಥಾಪಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಿಗೆ ವಿಚಾರ ವಿನಿಮಯಕ್ಕಾಗಿ ಸೂಕ್ವವಾದ ವೇಧಿಕೆ ಒದಗಿಸಿದಂತಾಗುತ್ತದೆ. ಶೈಕ್ಷಣಿಕ ಪ್ರಗತಿಯ ಜೊತೆಗೆ ದೇಶವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶುದ್ಧ ವಿಜ್ಞಾನ ವಿಭಾಗದ ಡೀನ್ ಪ್ರೊ.ಖಡ್ಕೆ ಉದಯ ಕುಮಾರ್, ಕಾರ್ಯಕ್ರಮ ಸಂಚಾಲಕರಾದ ಪ್ರೊ.ಕೆ.ಎಸ್ ಲೋಕೇಶ್, ಸಹ ಸಂಚಾಲಕ ಡಾ.ಸಾದು ಸೂರ್ಯಕಾಂತ ಎಸ್., ಪ್ರೊ.ಅರುಣ್‌ಕುಮಾರ ಲಗಶೆಟ್ಟಿ ಉಪಸ್ಥಿತರಿದ್ದರು.

ಎರಡು ದಿನಗಳ ಹಳೆಯ ವಿದ್ಯಾರ್ಥಿಗಳ ಉಪನ್ಯಾಸ ಸರಣಿಯಲ್ಲಿ ವಿಭಾಗದ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ