ಕೊಪ್ಪಳ, ಅಕ್ಟೋಬರ್ 24ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿನ ಫಾರ್ಮಸಿ ಆಫೀಸರ್ ಹಾಗೂ ನರ್ಸಿಂಗ್ ಆಫೀಸರ್(ಶುಶ್ರೂಷಾಧಿಕಾರಿ) ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳು ಅಕ್ಟೋಬರ್ 26 ರಂದು ಕೊಪ್ಪಳ ತಾಲ್ಲೂಕಿನ 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಪ್ರಯುಕ್ತ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಯಾವುದೇ ರೀತಿಯ ಪರೀಕ್ಷಾ ಅಕ್ರಮ, ಅವ್ಯವಹಾರಗಳು ನಡೆಯದಂತೆ ಅಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುರೇಶ್. ಬಿ. ಇಟ್ನಾಳ್ ಅವರು ಆದೇಶ ಹೊರಡಿಸಿದ್ದಾರೆ.
ಅಂದು ಕೊಪ್ಪಳದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ), ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಹಾಗೂ ಎಸ್ ಜಿ ವಿ ವಿ ಟಿ ಎಸ್ ಪೂಜ್ಯ ಶ್ರೀ ಮರಿಶಾಂತವೀರ ಸ್ವಾಮೀಜಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ಗಂಟೆಯಿAದ ಮಧ್ಯಾಹ್ನ 12.30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02.30 ಗಂಟೆಯಿAದ ಸಂಜೆ 4.30 ಗಂಟೆಯವರೆಗೆ ಎರಡು ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿವೆ.
ಆದೇಶದನ್ವಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.
ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.