Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕಂಪ್ಲಿ: ಆಸ್ತಿ ತೆರಿಗೆಯಲ್ಲಿ ಶೇ.05 ರಷ್ಟು ಏರಿಕೆ


ಬಳ್ಳಾರಿ,ಏ.06

ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ಮತ್ತು ವಾಣಿಜ್ಯ ಉದ್ದೇಶದ ಆಸ್ತಿಗಳ ತೆರಿಗೆಯನ್ನು 2026-27ನೇ ಸಾಲಿಗೆ ಅನ್ವಯವಾಗುವಂತೆ ಹೆಚ್ಚಳ ಮಾಡಲಾಗಿದೆ ಎಂದು

ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ನಗರಾಡಳಿತ ನಿರ್ದೇಶನಾಲಯದ ಸುತ್ತೋಲೆ ಮತ್ತು ಕರ್ನಾಟಕ ಪುರಸಭೆಗಳ ಕಾಯ್ದೆ 1964ರ ತಿದ್ದುಪಡಿ ನಿಯಮಗಳನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಆಸ್ತಿ ತೆರಿಗೆಯನ್ನು ಮಾರುಕಟ್ಟೆ ಮೌಲ್ಯದ ಆಧಾರದ ಮೇಲೆ ಪರಿಷ್ಕರಿಸುವುದು ಕಡ್ಡಾಯವಾಗಿದೆ.

ಕಂಪ್ಲಿ ಪುರಸಭೆ ವ್ಯಾಪ್ತಿಯ ಎಲ್ಲಾ ಆಸ್ತಿ ಮಾಲೀಕರಿಗೆ ಈ ಪರಿಷ್ಕೃತ ದರ ಅನ್ವಯವಾಗಲಿದೆ. ವಸತಿ ಆಸ್ತಿಗಳಿಗೆ ಶೇ.05 ರಷ್ಟು ತೆರಿಗೆ ಹೆಚ್ಚಳ, ವಾಣಿಜ್ಯ ಮತ್ತು ಕೈಗಾರಿಕಾ ಆಸ್ತಿಗಳ ಖಾಲಿ ನಿವೇಶನ ಹಾಗೂ ಕಟ್ಟಡಗಳಿಗೆ ಶೇ.05 ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದ್ದು, ಈ ಹೊಸ ದರಗಳು 2026-27ನೇ ಆರ್ಥಿಕ ಸಾಲಿಗೆ ಅನ್ವಯವಾಗಲಿವೆ.

ಆಸ್ತಿ ಮಾಲೀಕರು ಈ ಬದಲಾವಣೆಯನ್ನು ಗಮನಿಸಿ, ಪರಿಷ್ಕೃತ ದರದಂತೆ ತೆರಿಗೆ ಪಾವತಿಸಿ ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ