Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

10ನೇ ವರ್ಷದ ಮಾವು ಪ್ರದರ್ಶನ & ಮಾರಾಟ ಮೇಳ: ಹೆಸರು ನೋಂದಾಯಿಸಿ



ಕೊಪ್ಪಳ ಏಪ್ರಿಲ್ 23: ತೋಟಗಾರಿಕೆ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ 10ನೇ ವರ್ಷದ ಮಾವು ಮಾರಾಟ ಮೇಳ ಮತ್ತು ಪ್ರದರ್ಶನವನ್ನು ಆಯೋಜಿಸಲಾಗುತ್ತಿದ್ದು, ಭಾಗವಹಿಸಲಿಚ್ಛೀಸುವ ಮಾವು ಬೆಳೆಗಾರರು ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಕೊಪ್ಪಳ ತೋಟಗಾರಿಕೆ ಜಂಟಿ ನಿರ್ದೇಶಕರಾದ ಕೃಷ್ಣ ಸಿ. ಉಕ್ಕುಂದ ಅವರು ತಿಳಿಸಿದ್ದಾರೆ.

ರೈತರಿಂದ ನೇರವಾಗಿ ಗ್ರಾಹಕರಿಗೆ ಕೊಪ್ಪಳ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಮಾವು ಬೆಳೆಗೆ ಉತ್ತಮ ಮಾರುಕಟ್ಟೆ ಒದಗಿಸುವ ಮತ್ತು ಕೊಪ್ಪಳ ಜಿಲ್ಲೆಯ ನಾಗರಿಕರಿಗೆ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಯೋಗ್ಯ ಬೆಲೆಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರಿಂದ ನೇರವಾಗಿ ಗ್ರಾಹಕರಿಗೆ ಒದಗಿಸುವ ಉದ್ದೇಶದಿಂದ ತೋಟಗಾರಿಕೆ ಇಲಾಖೆ ವತಿಯಿಂದ 10ನೇ ವರ್ಷದ ಮಾವು ಮೇಳವನ್ನು ಮೇ ತಿಂಗಳ ಎರಡನೇ ವಾರದಲ್ಲಿ ಮಾವು ಪ್ರದರ್ಶನ ಮತ್ತು ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳ ಮಾರಾಟ ಮೇಳವನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಈ ಮೇಳದಲ್ಲಿ ಭಾಗವಹಿಸುವ ಆಸಕ್ತ ಜಿಲ್ಲೆಯ ಮಾವು ಬೆಳೆಗಾರರು ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲು ಮುಂಗಡವಾಗಿ ಮಾರಾಟ ಮಳಿಗೆಗಳನ್ನು ಕಾಯ್ದಿರಿಸಲು ತಮ್ಮ ಹೆಸರನ್ನು ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಹತ್ತಿರ ಹೆಸರು ನೋದಾಯಿಸಬೇಕು.

ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು, ಆಸಕ್ತ ರೈತರು ತಮ್ಮ ಪಹಣಿ ಪ್ರತಿಯೊಂದಿಗೆ, ತಮ್ಮ ಹೆಸರು, ವಿಳಾಸ, ಸರ್ವೆ ನಂಬರ್, ಬೆಳೆ, ತಳಿಗಳು ಹಾಗೂ ವಿಸ್ತೀರ್ಣ ಮುಂತಾದ ವಿವರಗಳೊಂದಿಗೆ ಈ ಕೆಳಗೆ ನಮೂದಿಸಿದ ಅಧಿಕಾರಿಗಳಿಗೆ ನೀಡುವಂತೆ ಪ್ರಕಟಣೆಯಲ್ಲಿ ಸೂಚಿಸಲಾಗಿದೆ. ತಮ್ಮ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಲು ಹಾಗೂ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಈ ಮೂಲಕ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕೊಪ್ಪಳ ಮೊ.ಸಂ: 9611888607, ಗಂಗಾವತಿ ಮೊ.ಸಂ: 9480257282, ಕುಷ್ಟಗಿ ಮೊ.ಸಂ: 9743518608 ಮತ್ತು ಯಲಬುರ್ಗಾ ಮೊ.ಸಂ: 9945644338 ಹಾಗೂ ಕೇಂದ್ರ ಸ್ಥಾನಿಕ ಸಹಾಯಕರ ಮೊ.ಸಂ: 8095359179 & ಕೊಪ್ಪಳ ತೋಟಗಾರಿಕೆ ಕಿಸಾನ ಮಾಲ್ ಕೊಪ್ಪಳ ಮೊ.ಸಂ: 9902792635, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ