Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನ.14 ರಂದು ನೀರಾವರಿ ಸಲಹಾ ಸಮಿತಿ ಸಭೆ





ಬಳ್ಳಾರಿ,ನ.10

ಪ್ರಸ್ತಕ ಸಾಲಿಗೆ ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ತುಂಗಾಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳಿಗೆ ಒದಗಿಸುವ ಕುರಿತು ಚರ್ಚಿಸಲು ನ.14 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3 ನೇ ಮಹಡಿಯ ಕೊಠಡಿ ಸಂಖ್ಯೆ 334 ರ ಸಮ್ಮೇಳನ ಸಭಾಂಗಣದಲ್ಲಿ 125 ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ.

ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಇಲಾಖೆ ಹಾಗೂ ಬೆಂಗಳೂರು ನಗರಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆದ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಭೆಗೆ ಸಂಬ೦ಧಿಸಿದ ಸಚಿವರು, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರು, ರೈತ ಮುಖಂಡರು ಭಾಗವಹಿಸಿ ತಮ್ಮ ಸಲಹೆ ಸೂಚನೆ ನೀಡಬಹುದು ಎಂದು ತುಂಗಾಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಆದ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ