Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.27 ರಂದು ನಾಡಪ್ರಭು ಕೆಂಪೇಗೌಡ ಜಯಂತಿ


ಬಳ್ಳಾರಿ,ಜೂ.26



ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಜೂ.27 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ರಾಜ್ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಏರ್ಪಡಿಸಲಾಗಿದೆ.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಬಳ್ಳಾರಿ ತಾಲ್ಲೂಕಿನ ಹೊಸಯರ್ರಗುಡಿ ಗ್ರಾಮದ ಸಹಶಿಕ್ಷಕ ನಂದೀಶ್ ಪುಂಡಿ ಅವರು ನಾಡಪ್ರಭು ಕೆಂಪೇಗೌಡ ಅವರ ಕುರಿತಾಗಿ ವಿಶೇಷ ಉಪನ್ಯಾಸ ನೀಡುವರು.

ಕವಿತಾ ಗಂಗೂರು ತಂಡದಿಂದ ಸುಗಮ ಸಂಗೀತ ಇರಲಿದೆ.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ: ಸಚಿವ ಬಿ. ನಾಗೇಂದ್ರ ಅವರಿಂದ ಗಾಂಧೀಜಿ ಪ್ರತಿಮೆಗೆ ನಮನ, 150 ಅಡಿ ಎತ್ತರದ ಧ್ವಜಾರೋಹಣವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----