Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವಸ್ಥಾನಗಳ ಹುಂಡಿಗೆ 360 ಡಿಗ್ರಿ ಸಿಸಿಟಿವಿ ಭದ್ರತೆ: ಎಡಿಸಿ ಝುಬೇರ್ ಸೂಚನೆ


ಬಳ್ಳಾರಿ,ಜು.28
ಜಿಲ್ಲೆಯ ಎಲ್ಲ ದೇವಾಲಯಗಳ ಭಕ್ತರ ಕಾಣಿಕೆ ಹುಂಡಿಗಳಿಗೆ ಸೂಕ್ತ ಭದ್ರತೆ ಒದಗಿಸಿ, 360 ಡಿಗ್ರಿ ಸಿಸಿಟಿವಿ ನಿಗಾ ವ್ಯವಸ್ಥೆ ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್. ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇವಸ್ಥಾನಗಳ ಹುಂಡಿ ಭದ್ರತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 713 ದೇವಾಲಯಗಳಲ್ಲಿ ಈಗಾಗಲೇ 354 ದೇವಾಲಯಗಳ ಮಾನಿಟರಿಂಗ್ ಪೂರ್ಣಗೊಂಡಿದ್ದು, ಉಳಿದ ದೇವಾಲಯಗಳಲ್ಲೂ ಶೀಘ್ರವೇ ನಿಗಾ ವ್ಯವಸ್ಥೆ ಅಳವಡಿಸಬೇಕು ಎಂದರು.
ಹುAಡಿ ಎಣಿಕೆ ಕಾರ್ಯವು ಸಂಪೂರ್ಣ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಬೇಕು. ಕಳ್ಳತನ ಹಾಗೂ ಇತರೆ ಅಕ್ರಮಗಳನ್ನು ತಡೆಯಲು ಡಿಜಿಟಲ್ ರೂಪದಲ್ಲಿ ಕಾಣಿಕೆ ಸ್ವೀಕರಿಸುವ ವ್ಯವಸ್ಥೆ ಕಲ್ಪಿಸುವ ಮೂಲಕ ಭಕ್ತರಿಗೆ ಯಾವುದೇ ತೊಂದರೆಯಾಗದAತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಬಳ್ಳಾರಿಯ ಪ್ರಸಿದ್ಧ ಕನಕದುರ್ಗಮ್ಮ ದೇವಸ್ಥಾನದಲ್ಲಿ ಸಿಸಿಟಿವಿ ಮಾನಿಟರಿಂಗ್ ಕಾಮಗಾರಿ ಏಳು ದಿನಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ದೇವಾಲಯಗಳ ಸೂಕ್ತ ಸ್ಥಳಗಳಲ್ಲಿ ಎಲ್ಲರಿಗೂ ಗೋಚರಿಸುವ ರೀತಿಯಲ್ಲಿ ಹುಂಡಿಗಳನ್ನು ಅಳವಡಿಸಿ ಭದ್ರತೆ ಹೆಚ್ಚಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ 5 ಎ ವರ್ಗ, 5 ಬಿ ವರ್ಗ ಹಾಗೂ 703 ಸಿ ವರ್ಗ ಸೇರಿ ಒಟ್ಟು 713 ದೇವಾಲಯಗಳಿದ್ದು, ಎಲ್ಲೆಡೆ ಭದ್ರತಾ ವ್ಯವಸ್ಥೆ ಬಲಪಡಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯದಲ್ಲಿ ಸರ್ಕಾರಿ ನೌಕರರಿಗೆ ಮಾತ್ರ ಅವಕಾಶ ನೀಡಬೇಕು, ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ರಚಿಸಬೇಕು ಹಾಗೂ ಪ್ರತಿ 15 ದಿನಗಳಿಗೊಮ್ಮೆ ಸಂಬAಧಿತ ಅಧಿಕಾರಿಗಳು ದೇವಾಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಯಿತು. ಹುಂಡಿ ಎಣಿಕೆ ವೇಳೆ ಕಳ್ಳತನದಂತಹ ಪ್ರಕರಣಗಳು ಕಂಡುಬAದರೆ ಸಂಬAಧಿತ ದೇವಾಲಯ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುರುಪೂರ್ಣಿಮಾ ದೇವಸ್ಥಾನಗಳ ಹುಂಡಿಗೆ 360 ಡಿಗ್ರಿ ಸಿಸಿಟಿವಿ ಭದ್ರತೆ: ಎಡಿಸಿ ಝುಬೇರ್ ಸೂಚನೆಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಕ್ರೀಡಾಪಟುಗಳ ಪ್ರೋತ್ಸಾಹಧನ, ಶೈಕ್ಷಣಿಕ ಶುಲ್ಕ ಮರುಪಾವತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ----ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಸರ್ಕಾರಿ ಧರದಂತೆ ಮೀನುಮರಿ ವಿತರಣೆಬಾಲಚಂದ್ರನ್ ಎಸ್. ರವರ ಅಧ್ಯಕ್ಷತೆಯಲ್ಲಿ ಜರುಗಿದ ಕೊಪ್ಪಳ ತಾ.ಪಂ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ----ಅಂಬೇಡ್ಕರ್ ಜೀವನ-ಸಾಧನೆ ವಿದ್ಯಾರ್ಥಿಗಳಿಗೆ ದಾರಿದೀಪ: ಬಸವರಾಜ ಅಮಾತಿಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್.ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದಲ್ಲಿ ಜರುಗಿದ ವಿಶೇಷ ಉಚಿತ ಆಯುμï ಆರೋಗ್ಯ ಶಿಬಿರ ಕಾರ್ಯಕ್ರಮ