Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬಳ್ಳಾರಿಯಲ್ಲಿ ಸಂಭ್ರಮದ 71ನೇ ಕರ್ನಾಟಕ ರಾಜ್ಯೋತ್ಸವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ

ರಾಜ್ಯೋತ್ಸವ ಒಂದು ದಿನದ ಸಂಭ್ರಮವಲ್ಲ, ತಿಂಗಳ ಪೂರ್ತಿ ಹಬ್ಬ: ಸರ್ವಧರ್ಮ ಸಮನ್ವಯತೆಯೇ ಕರ್ನಾಟಕದ ಹೆಮ್ಮೆ

ಬಳ್ಳಾರಿ,ನ.01(:
ಬೇರೆ ಹಬ್ಬಗಳನ್ನು ಕೇವಲ ಮೂರ್ನಾಲ್ಕು ದಿನ ಆಚರಿಸಿದರೆ, ಕರ್ನಾಟಕ ರಾಜ್ಯೋತ್ಸವವನ್ನು ರಾಜ್ಯಾದ್ಯಂತ ತಿಂಗಳ ಪೂರ್ತಿ ಹಬ್ಬದಂತೆ ಆಚರಿಸಲಾಗುತ್ತದೆ. ಎರಡು ಸಾವಿರಕ್ಕೂ ಹೆಚ್ಚು ವರ್ಗಗಳ ಭವ್ಯ ಇತಿಹಾಸವಿರುವ ಕರ್ನಾಟಕದಲ್ಲಿ ಸರ್ವ ಧರ್ಮೀಯರು ಅಣ್ಣ-ತಮ್ಮಂದಿರAತೆ ಬದುಕುತ್ತಿರುವುದು ಈ ನಾಡಿನ ದೊಡ್ಡ ಹೆಮ್ಮೆ ಎಂದು ವಸತಿ ಸಚಿವರಾದ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು.
ಜಿಲ್ಲಾಡಳಿತದ ವತಿಯಿಂದ ನಗರದ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಶ್ರೀ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಕರ್ನಾಟಕ ರಾಜ್ಯೋತ್ಸವ ಸಂದೇಶ ನೀಡಿ ಅವರು ಮಾತನಾಡಿದರು.
ಕನ್ನಡ ಅತ್ಯಂತ ಸರಳ ಮತ್ತು ಸುಂದರವಾದ ಭಾಷೆಯಾಗಿದ್ದು, ಹೊರರಾಜ್ಯಗಳಿಂದ ಬಂದವರೂ ಇದನ್ನು ಸುಲಭವಾಗಿ ಕಲಿತು ಮಾತನಾಡುತ್ತಿದ್ದಾರೆ. ಯುವಕರು ಸಿರಿತನಕ್ಕೆ ಹಿಗ್ಗದೆ, ಬಡತನಕ್ಕೆ ಕುಗ್ಗದೆ ಶ್ರಮವಹಿಸಿ ಬೆಳೆಯಬೇಕು, ಅವರೇ ನಾಡಿನ ಭವ್ಯ ಭವಿಷ್ಯ ಎಂದು ಕರೆ ನೀಡಿದರು.
*ಬಡವರಿಗಾಗಿ ‘ಆರನೇ ಗ್ಯಾರಂಟಿ’ ಮನೆಗಳ ಯೋಜನೆ:*
ಕರ್ನಾಟಕ ಸರ್ಕಾರವು ಬಡವರ ಕಲ್ಯಾಣಕ್ಕೆ ಬದ್ಧವಾಗಿದ್ದು, ಈಗಾಗಲೇ ಜಾರಿಗೆ ತಂದಿರುವ ಐದು ಪ್ರಮುಖ ಗ್ಯಾರಂಟಿಗಳ ಜೊತೆಗೆ ಬಡವರಿಗೆ ಸೂರು ಕಲ್ಪಿಸುವುದು ನಮ್ಮ ಸರ್ಕಾರದ ‘ಆರನೇ ಗ್ಯಾರಂಟಿ’ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪ್ರತಿಪಾದಿಸಿದರು.
*ಬಡವರ ಮನೆಗಳಿಗೆ ಸರ್ಕಾರದ ವಿಶೇಷ ಅನುದಾನ:*
ಹಿಂದಿನ ಸರ್ಕಾರದ ಅವಧಿಯಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿAದ ಮಂಜೂರಾಗಿದ್ದ 1,80,280 ಮನೆಗಳು ಫಲಾನುಭವಿಗಳು ವಂತಿಕೆ ಹಣ ಕಟ್ಟಲಾಗದೆ ಅರ್ಧಕ್ಕೆ ನಿಂತಿದ್ದವು. ಪ್ರತಿ ಮನೆಗೆ ತಗಲುವ ವೆಚ್ಚದಲ್ಲಿ ಫಲಾನುಭವಿಗಳು ರೂ. 4.5 ಲಕ್ಷ ಭರಿಸಬೇಕಾಗಿದ್ದು, ಬಡವರಿಗೆ ಇದು ಅಸಾಧ್ಯವಾಗಿತ್ತು. ಈ ಸಮಸ್ಯೆಯನ್ನು ಅರಿತ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟವು ಬಡವರ ಪಾಲಿನ ಹಣವನ್ನು ಭರಿಸಲು 4,700 ಕೋಟಿ ರೂ. ಅನುಮೋದನೆ ನೀಡಿದೆ ಎಂದರು.
*ಹAತ-ಹAತವಾಗಿ ಮನೆಗಳ ವಿತರಣೆ:*
2024ರ ಮಾರ್ಚ್ನಲ್ಲಿ ರಾಜ್ಯಾದ್ಯಂತ 36,789 ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಜನವರಿಯಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 42,345 ಮನೆಗಳನ್ನು ವಿತರಿಸಲಾಗಿದ್ದು, ಒಟ್ಟಾರೆ ಸರ್ಕಾರದಿಂದ 79,000 ಮನೆಗಳನ್ನು ಪೂರ್ಣಗೊಳಿಸಿ ಕೊಡಲಾಗಿದೆ. ಉಳಿದ 33,000 ಮನೆಗಳನ್ನು ಮುಂಬರುವ ವರ್ಷದ ಫೆಬ್ರವರಿ 27ರೊಳಗೆ ಪೂರ್ಣಗೊಳಿಸಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
*ಬೆಂಗಳೂರು ‘1 ಲಕ್ಷ ವಸತಿ ಯೋಜನೆ'😘
ಬೆಂಗಳೂರಿನಲ್ಲಿ ಆಟೋ ಚಾಲಕರು, ಬೀದಿಬದಿ ವ್ಯಾಪಾರಿಗಳು ಹಾಗೂ ಬಡವರಿಗಾಗಿ ರೂಪಿಸಲಾದ ಯೋಜನೆಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆ ಮಾಡಲಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ರೂ. 1,600 ಕೋಟಿ ಒದಗಿಸುವ ಮೂಲಕ ಬಡವರ ಮೇಲಿನ ಹೊರೆ ತಪ್ಪಿಸಿ, ನವೆಂಬರ್ 29ರಂದು 6,000 ಮನೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಶಾಸಕ ನಾರಾ ಭರತ್ ರೆಡ್ಡಿ ಅವರ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ ಮಂಜೂರಾಗಿದ್ದ ಮನೆಗಳಿಗೂ ಸರ್ಕಾರದ ವತಿಯಿಂದಲೇ ಹಣ ಒದಗಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸದ್ಯ ಸುಮಾರು 2,000 ಮನೆಗಳು ಸಿದ್ಧವಾಗಿದ್ದು, ಶೀಘ್ರದಲ್ಲೇ ಕ್ಯಾಬಿನೆಟ್ ಒಪ್ಪಿಗೆ ಪಡೆದು ಬಡವರಿಗೆ ಹಸ್ತಾಂತರಿಸಲಾಗುವುದು ಎಂದು ಭರವಸೆ ನೀಡಿದರು.
*ಸಾಧಕರ ಸನ್ಮಾನ:*
2026ನೇ ಸಾಲಿನ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಮಂದಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಾಂಸ್ಕೃತಿಕ (ರಂಗಭೂಮಿ): ಬಸವರಾಜ ಜೋಳದರಾಶಿ, ಬಳ್ಳಾರಿ
ಸಾಂಸ್ಕೃತಿಕ (ಜಾನಪದ): ಹೆಚ್.ಪಿ. ಶಿಕಾರಿ ರಾಮು, ಕಂಪ್ಲಿ
ಕನ್ನಡ ಸೇವೆ: ಕೆ. ಎಂ. ಮಹೇಶ್ವರ ಸ್ವಾಮಿ, ಬಳ್ಳಾರಿ
ಕ್ರೀಡೆ (ಈಜು): ರಜಿನಿ ಲಕ್ಕ, ಬಳ್ಳಾರಿ
ಸಮಾಜ ಸೇವೆ: ಜಿ. ವೀರೇಶ, ಸಂಡೂರು ಹಾಗೂ ಪಿ. ಹುಸೇನ್ ಸಾಹೇಬ್, ಬಳ್ಳಾರಿ
ವೈದ್ಯಕೀಯ: ಯೋಗಾನಂದ ರೆಡ್ಡಿ, ವೈ.ಸಿ., ಬಳ್ಳಾರಿ
ಪತ್ರಿಕೋದ್ಯಮ: ಎನ್. ವೀರಭದ್ರಗೌಡ, ಬಳ್ಳಾರಿ
ಕೃಷಿ: ಎಸ್. ಸಾದಣ್ಣ, ತೆಕ್ಕಲಕೋಟೆ (ಸಿರುಗುಪ್ಪ ತಾಲ್ಲೂಕು)
ಕೃಷಿ ತೋಟಗಾರಿಕೆ: ಚಲವಾದಿ ದೊಡ್ಡಬಸಪ್ಪ, ಮುಷ್ಟಗಟ್ಟೆ (ಕುರುಗೋಡು ತಾಲ್ಲೂಕು).
71ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಶಾಲೆ ಮತ್ತು ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ಆಶು-ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಕನ್ನಡ ಪ್ರೇಮಿಗಳ ನೇತೃತ್ವದಲ್ಲಿ ಕಳೆದ 25 ವರ್ಷಗಳಿಂದ ಹಂಪಿಯ ತಾಯಿ ಭುವನೇಶ್ವರಿ ದೇವಸ್ಥಾನದಿಂದ ತರುತ್ತಿದ್ದ ಕನ್ನಡ ಜ್ಯೋತಿಯನ್ನು ಈ ವರ್ಷವೂ ಸಹ ಸಚಿವರ ಸಮ್ಮುಖದಲ್ಲಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.
ಬಳಿಕ ವಿವಿಧ ಪ್ರಕಾರ ಕಲಾ ತಂಡಗಳ ವಾದ್ಯಗಳ ಕಲರವದೊಂದಿಗೆ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳನ್ನೊಳಗೊಂಡ ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಕನ್ನಡ ಪ್ರೇಮ ಮೂಡಿಸಲಾಯಿತು.
*ಸ್ತಬ್ಧಚಿತ್ರಗಳ ಅದ್ದೂರಿ ಮೆರವಣಿಗೆ:*
71ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸ್ತಬ್ಧಚಿತ್ರಗಳ ಅದ್ದೂರಿ ಮೆರವಣಿಗೆ ನಡೆಯಿತು. ವಸತಿ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರು ಚಾಲನೆ ನೀಡಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಸಾರಿಗೆ ಇಲಾಖೆ) ವತಿಯಿಂದ ಬಳ್ಳಾರಿಯ ಮಾದರಿ ಕ್ಲಾಕ್ ಟವರ್, ತೋಟಗಾರಿಕೆ ವತಿಯಿಂದ ಪರಿಸರ ಸಂರಕ್ಷಣೆಯ ಗಿಡಗಳು ಪ್ರದರ್ಶಿಸಿದರೆ ಮಹಾನಗರ ಪಾಲಿಕೆ ವತಿಯಿಂದ ಪ್ಲಾಸ್ಟಿಕ್ ಮುಕ್ತ ನಗರ-ಸ್ವಚ್ಛ ನಗರ ವಿಷಯದೊಂದಿಗೆ ಸ್ತಬ್ಧಚಿತ್ರ ರೂಪಿಸಲಾಗಿತ್ತು. ಅದರಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಗೃಹಲಕ್ಷಿö್ಮ ಯೋಜನೆಯ ಸ್ತಬ್ಧಚಿತ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡೆಂಗ್ಯೂ ಹಾಗೂ ಇತರೆ ರೋಗಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಸೇರಿದಂತೆ ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸ್ತಬ್ಧಚಿತ್ರಗಳು ಗಮನ ಸೆಳೆದವು.
ವಿವಿಧ ಕನ್ನಡ ಪರ ಸಂಘಟನೆಗಳಿAದ ಕನ್ನಡ ತಾಯಿ ಭುವನೇಶ್ವರಿ ದೇವಿ ಅವರ ಭಾವಚಿತ್ರ ಹಾಗೂ ಕರ್ನಾಟಕ ಏಕೀಕರಣದ ರೂವಾರಿ ಬಳ್ಳಾರಿಯ ಹೋರಾಟಗಾರ ಪಿಂಜಾರ ರಂಜಾನ್ ಸಾಬ್ ಅವರ ಭಾವಚಿತ್ರ ವಾಹನ ಕಾರ್ಯಕ್ರಮದ ವಿಶೇಷವಾಗಿತ್ತು. ಸಚಿವರು ವಾಹನ ಚಲಾಯಿಸಿ ನೋಡುಗರ ಗಮನಸೆಳೆದರು.
*ಸಚಿವರಿಂದ ‘ಗ್ರಾಮಾನುಭವ' ಕಾರ್ಯಕ್ರಮಕ್ಕೆ ಚಾಲನೆ:*
ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕು, ಕೃಷಿ ಚಟುವಟಿಕೆಗಳು ಹಾಗೂ ಸಂಸ್ಕೃತಿಯ ಪ್ರಾಯೋಗಿಕ ಪರಿಚಯ ಮಾಡಿಕೊಡುವ ಉದ್ದೇಶದಿಂದ ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಯೋಜನಾ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ‘ಗ್ರಾಮಾನುಭವ' ಎಂಬ ವಿನೂತನ ಕಾರ್ಯಕ್ರಮವಕ್ಕೆ ವಸತಿ ಸಚಿವ ಬಿ. ಝಡ್. ಜಮೀರ್ ಅಹಮದ್ ಖಾನ್ ಅವರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.
ನಗರ ಪ್ರದೇಶದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ 8, 9 ಮತ್ತು 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಹಾಗೂ ಗ್ರಾಮೀಣ ಕಲೆ ಮತ್ತು ಸಂಸ್ಕೃತಿಯ ನೇರ ಮತ್ತು ನೈಜ ಅನುಭವವನ್ನು ಒದಗಿಸುವುದು ಪ್ರಮುಖ ಗುರಿಯಾಗಿದೆ. ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಜೀವನದ ಬಗ್ಗೆ ಅರಿವು ಹಾಗೂ ಪ್ರಾಯೋಗಿಕ ಜ್ಞಾನ ಮೂಡಿಸಲು ಈ ವಿನೂತನ ಯೋಜನೆ ಸಹಕಾರಿಯಾಗಲಿದೆ.
ಸಮಾರಂಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಪಿ.ಎಸ್.ಹರ್ಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್ ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿ, ಮಹಾನಗರ ಪಾಲಿಕೆ ಸದಸ್ಯರು ಮತ್ತು ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಾಲಾ-ಕಾಲೇಜು ಮಕ್ಕಳು, ಸಾರ್ವಜನಿಕರು ಉಪಸ್ಥಿತರಿದ್ದರು.

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿಯಲ್ಲಿ ಸಂಭ್ರಮದ 71ನೇ ಕರ್ನಾಟಕ ರಾಜ್ಯೋತ್ಸವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಹಿರಿಯ ನಾಗರಿಕರಿಗೆ ಮರೆವಿನ ಕಾಯಿಲೆ (ಡಿಮೆನ್ಷಿಯಾ) ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮಹಿರಿಯ ನಾಗರಿಕರಿಗೆ ಮರೆವಿನ ಕಾಯಿಲೆ (ಡಿಮೆನ್ಷಿಯಾ) ತಪಾಸಣಾ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ನವೆಂಬರ್ 30 ಕೊನೆಯ ದಿನಬಳ್ಳಾರಿ: ಲಿಡ್ಕರ್ ನಿಗಮದ ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಲೋಕಾಯುಕ್ತ: ಬಾಕಿ ಪ್ರಕರಣಗಳ ವಿಚಾರಣೆ-ವಿಲೇವಾರಿ -- ಭ್ರಷ್ಟಾಚಾರ ನಿರ್ಮೂಲನೆ ಎಲ್ಲರ‌ ಹೊಣೆ: ಉಪ ಲೋಕಾಯುಕ್ತ ಬಿ.ವೀರಪ್ಪಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮ ---------------ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕುರಿತ ಪೋಸ್ಟರ್ ಬಿಡುಗಡೆಪರಿಶಿಷ್ಟ ಜಾತಿ, ಪಂಗಡಗಳ ಅಲೆಮಾರಿ ಸಮುದಾಯದವರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ